ಬ್ರೇಕಿಂಗ್ ನ್ಯೂಸ್
27-11-25 09:07 pm Mangalore Correspondent ಕ್ರೈಂ
ಮಂಗಳೂರು, ನ.27 : ಹೊರಗುತ್ತಿಗೆ ಸಿಬಂದಿಯೊಬ್ಬರ ಸಂಬಳವನ್ನು ನೀಡುವುದಕ್ಕಾಗಿ ಲಂಚ ಕೇಳಿ, 30 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಉಳ್ಳಾಲ ಮತ್ತು ಮಂಗಳೂರು ತಾಲೂಕಿನ ಭೂ ದಾಖಲೆಗಳ ವಿಭಾಗದ ಸಹಾಯಕ ನಿರ್ದೇಶಕ ಸೇರಿ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ನಗರ ಆಸ್ತಿ ಮಾಲೀಕತ್ವ ದಾಖಲೆ (ಯುಪಿಓಆರ್) ಯೋಜನೆಯಲ್ಲಿ ಹೊರ ಗುತ್ತಿಗೆ ಸಿಬಂದಿಯಾಗಿದ್ದ ವ್ಯಕ್ತಿಯೊಬ್ಬರನ್ನು ಕೆಲಸದಲ್ಲಿ ಮುಂದುವರಿಸುವುದು ಮತ್ತು ಬಾಕಿಯಿರುವ ಸಂಬಳದ ಮೊತ್ತವನ್ನು ಮಾಡಿಕೊಡಲು ಭೂ ದಾಖಲೆಗಳ ಅಧಿಕಾರಿಗಳು ಲಂಚದ ಬೇಡಿಕೆಯೊಡ್ಡಿದ್ದರು. ಉಳ್ಳಾಲದ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಸರ್ವೇಯರ್ ಕೃಷ್ಣಮೂರ್ತಿ 50 ಸಾವಿರ, ಮಂಗಳೂರು ತಾಲೂಕು ಸರ್ವೆ ವಿಭಾಗದ ಸಹಾಯಕ ನಿರ್ದೇಶಕ ಬಿ.ಕೆ ರಾಜು 10 ಸಾವಿರ, ಸರ್ವೆ ಸುಪರ್ ವೈಸರ್ ಎಸ್.ಧನಶೇಖರ ರೂ. 10 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದರು.
ಈ ಬಗ್ಗೆ ದೂರು ಪಡೆದ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದು, ನ.27ರ ಗುರುವಾರ ಸಂತ್ರಸ್ತ ವ್ಯಕ್ತಿಯಿಂದ ಲಂಚದ ಹಣ 30 ಸಾವಿರವನ್ನು ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ.ಕುಮಾರಿ, ಸುರೇಶ್ ಕುಮಾರ್, ಪೊಲೀಸ್ ನಿರೀಕ್ಷಕರಾದ ಭಾರತಿ, ಚಂದ್ರಶೇಖರ್ ಕೆ.ಎನ್, ರವಿ ಪವಾರ್, ರಾಜೇಂದ್ರ ನಾಯ್ಡು ಸಿಬಂದಿಗಳ ಜೊತೆ ಭಾಗವಹಿಸಿದ್ದರು.
The Lokayukta officials arrested three officers from the land records (survey) department of Ullal and Mangaluru taluk for allegedly demanding and accepting a bribe of ₹30,000. The officers had reportedly demanded money to continue the service of an outsourced employee working under the ULPOR (Urban Property Ownership Record) project and to release his pending salary.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm