ಬ್ರೇಕಿಂಗ್ ನ್ಯೂಸ್
28-11-25 06:23 pm HK News Desk ಕ್ರೈಂ
ದಾವಣಗೆರೆ, ನ 28 : ಚಿನ್ನಾಭರಣ ತಯಾರಕನ ಬಳಿ ಇದ್ದ 76 ಗ್ರಾಂ. ಬಂಗಾರವನ್ನು ಪೊಲೀಸರೇ ದರೋಡೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಪಿಎಸ್‌ಐಗಳು, ಅವರಿಗೆ ಸಹಾಯ ಮಾಡಿದ ಇಬ್ಬರು ಚಿನ್ನಾಭರಣ ವ್ಯಾಪಾರಿಗಳು ಸೇರಿ ಏಳು ಮಂದಿ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕಾರವಾರದ ಪದ್ಮನಾಭ ನಗರ ನಿವಾಸಿ, ಚಿನ್ನಾಭರಣ ತಯಾರಕ ಎಂ. ವಿಶ್ವನಾಥ ಚಿನ್ನಾಭರಣ ಕಳೆದುಕೊಂಡವರು. ರಾಣೆಬೆನ್ನೂರು ಸಂಚಾರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಪ್ರವೀಣ್, ಹಾವೇರಿ ಜಿಲ್ಲೆಯ ಹಂಸಭಾವಿ ಪೊಲೀಸ್ ಠಾಣೆಯ ಪಿಎಸ್‌ಐ ಮಾಳಪ್ಪ, ದಾವಣಗೆರೆಯ ಚಿನ್ನ-ಬೆಳ್ಳಿ ವ್ಯಾಪಾರಿಗಳಾದ ಸತೀಶ್ ರೇವಣ್ಕರ್, ನಾಗರಾಜ್ ರೇವಣ್ಕರ್, ದಿಳ್ಳೆಪ್ಪ, ನಾಗೇಶ್ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಬಂಧಿತರಾಗಿರುವ ಚಿನ್ನ-ಬೆಳ್ಳಿ ವ್ಯಾಪಾರಿಗಳು ವಿಶ್ವನಾಥ್ ಬಳಿ ಬಂಗಾರ ಇರುವುದು, ಆತ ಬರುವ, ಹೋಗುವ ಸಮಯದ ಬಗ್ಗೆ ಪ್ರಮುಖ ಆರೋಪಿಗಳಿಗೆ ಮಾಹಿತಿ ನೀಡಿ, ವಿಶ್ವನಾಥ ಅವರ ಫೋಟೋ ಕೂಡ ಕೊಟ್ಟಿದ್ದರು.
'ಆರೋಪಿತರಿಂದ ಅಂದಾಜು 8 ಲಕ್ಷ ರೂ.ಮೌಲ್ಯದ ಬಂಗಾರ, ಮೂರು ಕಾರು, ಏರ್ ಗನ್, ಎರಡು ನಕಲಿ ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಉಪ ವಿಭಾಗದ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ. ಇತ್ತೀಚೆಗೆ ಆರೋಪಿ ಮಾಳಪ್ಪನ ಬಗ್ಗೆ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ ಆತನ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಿ, ವೈರ್‌ಲೆಸ್ ವಿಭಾಗಕ್ಕೆ ನೇಮಿಸಲಾಗಿತ್ತು. ಅದೇ ರೀತಿ ಮತ್ತೊಬ್ಬ ಆರೋಪಿ ಪ್ರವೀಣ ಎಂಬಾತನನ್ನು ಸಾಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ವರದಿ ಮಾಡಿಕೊಂಡಿರಲಿಲ್ಲ,' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ
ಆಭರಣ ತಯಾರಕರೊಬ್ಬರಿಂದ 78 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ ಆರೋಪ ಎದುರಿಸುತ್ತಿರುವ ಪ್ರೊಬೇಷನರಿ ಪಿಎಸ್‌ಐ ಮಾಳಪ್ಪ ಚಿಪ್ಪಲಕಟ್ಟಿಯನ್ನು ಸೇವೆಯಿಂದ ವಜಾಗೊಳಿಸಿ ಪೊಲೀಸ್ ಇಲಾಖೆ ಆದೇಶಿಸಿದೆ. ಮತ್ತೊಬ್ಬ ಪಿಎಸ್‌ಐ ಪ್ರವೀಣ್‌ಕುಮಾರ್‌ನನ್ನ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಮಾಳಪ್ಪ ಚಿಪ್ಪಲಕಟ್ಟಿ ಹಾವೇರಿ ಜಿಲ್ಲೆಯ ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರವೀಣ್‌ಕುಮಾರ್ ರಾಣೆಬೆನ್ನೂರು ಸಂಚಾರ ಠಾಣೆಯಿಂದ ಶಿವಮೊಗ್ಗ ಜಿಲ್ಲೆಯ ಸಾಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
ಸಾರ್ವಜನಿಕರಿಗೆ ರಕ್ಷಣೆ ನೀಡುವ ಹಾಗೂ ನೊಂದವರಿಗೆ ನ್ಯಾಯ ಕೊಡಿಸುವಂತಹ ಬಹುಮುಖ್ಯ, ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ದರೋಡೆ ಕೃತ್ಯ ಎಸಗಿದ್ದು ಘೋರ ಅಪರಾಧ. ಮೊದಲ ಆರೋಪಿ ಮಾಳಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರವೀಣ್‌ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಆದೇಶದಲ್ಲಿ ತಿಳಿಸಿದ್ದಾರೆ.
ನ.24ರಂದು ನಸುಕಿನಲ್ಲಿ ಕಾರವಾರದ ಆಭರಣ ತಯಾರಕ ವಿಶ್ವನಾಥ್ ಅರ್ಕಸಾಲಿ ಅವರಿಂದ ₹ 7.5 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಿಎಸ್‌ಐ ಸೇರಿ 7 ಆರೋಪಿಗಳನ್ನು ಕೆಟಿಜೆ ನಗರ ಠಾಣೆಯ ಪೊಲೀಸರು ನ.25ರಂದು ಬಂಧಿಸಿದ್ದರು.
In a shocking incident from Davangere, two Police Sub-Inspectors themselves allegedly robbed 78 grams of gold worth ₹7.5 lakh from a jewellery manufacturer. The victim, Vishwanath from Karwar, was targeted after local gold dealers provided the accused officers with information about his movements and even his photo.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm