ಬ್ರೇಕಿಂಗ್ ನ್ಯೂಸ್
04-12-25 10:53 pm Bangalore Correspondent ಕ್ರೈಂ
ಬೆಂಗಳೂರು, ಡಿ.4 : ಇತ್ತೀಚೆಗೆ ಮೆಗಾ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಬಂಧನವಾಗಿದ್ದು ಪೊಲೀಸ್ ಇಲಾಖೆಯ ತಲೆ ತಗ್ಗಿಸುವಂತೆ ಮಾಡಿತ್ತು. ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನಿಂದ ಸೈಬರ್ ಠಾಣೆ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಹಣ ಕಳವುಗೈದ ಬಗ್ಗೆ ಪ್ರಕರಣ ದಾಖಲಾಗಿದೆ.
ಸೈಬರ್ ಠಾಣೆಯ ಪೊಲೀಸ್ ಸಿಬಂದಿ ಜೆ.ಬಿ. ಉಲ್ಲಾ ಎಂಬವರನ್ನು 11 ಲಕ್ಷ ಕಳವು ಪ್ರಕರಣದಲ್ಲಿ ಬಂಧಿಸಲಾಗಿದೆ. ಸೈಬರ್ ಪೊಲೀಸರು ಪ್ರಕರಣ ಒಂದರಲ್ಲಿ ಆರೋಪಿಯನ್ನು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಕಾರು ಸಮೇತ ಕರೆತಂದಿದ್ದು ಬಳಿಕ ಬಂಧನ ಮಾಡಲಾಗಿತ್ತು.
ಆರೋಪಿ ಬಳಿಕ ಜಾಮೀನಿನಲ್ಲಿ ಹೊರಬಂದು ಠಾಣೆಯಲ್ಲಿದ್ದ ಕಾರನ್ನು ಕರೆದೊಯ್ಯಲು ಬಂದಿದ್ದ. ಈ ವೇಳೆ ತನ್ನ ಕಾರಿನಲ್ಲಿಟ್ಟಿದ್ದ 11 ಲಕ್ಷ ರೂಪಾಯಿ ಬ್ಯಾಗ್ ನಾಪತ್ತೆಯಾಗಿತ್ತು. ತಕ್ಷಣವೇ ಸೈಬರ್ ಠಾಣೆಯ ಸಿಬ್ಬಂದಿಯವರ ಗಮನಕ್ಕೆ ತಂದಾಗ ಅಧಿಕಾರಿಗಳು ಮೊದಲಿಗೆ ಗಾಬರಿಗೊಂಡರು ಬಳಿಕ ಸಿಸಿಟಿವಿ ಪರಿಶೀಲಿಸಿದಾಗ, ಹೆಡ್ ಕಾನ್ಸ್‌ಟೇಬಲ್ ಜೆ.ಬಿ. ಉಲ್ಲಾ ಕಾರಿನಲ್ಲಿದ್ದ 11 ಲಕ್ಷ ರೂಪಾಯಿ ಹಣದ ಬ್ಯಾಗ್‌ನ್ನು ತೆಗೆದುಕೊಂಡು ಹೋಗಿರುವುದು ಕಂಡುಬಂದಿದೆ.
ಆದರೆ ಹಣ ಕದ್ದ ನಂತರ ಜೆಬಿ ಉಲ್ಲಾ ತನಗೇನೂ ಗೊತ್ತಿಲ್ಲ ಎನ್ನುವಂತಿದ್ದು ಎಂದಿನಂತೆ ಕೆಲಸಕ್ಕೆ ಬರುತ್ತಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂ ಅವರಿಗೆ ದೂರು ಸಲ್ಲಿಸಲಾಗಿತ್ತು. ಬಳಿಕ ಜೆಬಿ ಉಲ್ಲಾ ಅವರ ಮನೆಗೆ ಸರ್ಚ್ ಮಾಡಲು ತೆರಳಿದಾಗ, ಆತ ಮನೆ ಒಳಗೆ ಬಿಡದೆ ಗಲಾಟೆ ಮಾಡಿದ್ದ.
ಪೊಲೀಸರು ಸರ್ಚ್ ಮಾಡಿದಾಗ, ಮಲಗುವ ಕೋಣೆಯ ಬೆಡ್ ಕೆಳಗೆ ಲಕ್ಷಾಂತರ ರೂ. ಹಣವನ್ನು ಜೋಡಿಸಿ ಇಟ್ಟಿದ್ದು ಪತ್ತೆಯಾಯಿತು. ಕದ್ದ ಹಣದಿಂದಲೇ ತನ್ನ ಪತ್ನಿಗೆ ಆಭರಣಗಳನ್ನು ತೆಗೆದು ಕೊಟ್ಟಿರುವುದು ಕೂಡಾ ತನಿಖೆಯಲ್ಲಿ ಬಹಿರಂಗವಾಗಿದೆ. ಕದ್ದ ಹಣದಲ್ಲಿ ಸುಮಾರು ಎರಡು ಲಕ್ಷ ರೂಪಾಯಿ ಮಾತ್ರ ವಾಪಸ್ ನೀಡಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರು ನಗರದ ಪೊಲೀಸರನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇತ್ತೀಚೆಗೆ ಸಿದ್ದಾಪುರ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯಕ್ ಬಂಧಿತನಾಗಿದ್ದ. ಜೆಪಿ ನಗರದಲ್ಲಿ ಪೊಲೀಸರೇ ಸೀನಿಯರ್ ಸಿಟಿಜನ್ ಬಳಿ ಹಣ ಪಡೆದ ಆರೋಪವೂ ಕೇಳಿಬಂದಿತ್ತು. ಇದೀಗ ಸೈಬರ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಜೆಬಿ ಉಲ್ಲಾ ಮೇಲೆ ಕಳ್ಳತನದ ದೂರು ದಾಖಲಾಗಿದೆ.
In a shocking incident that has embarrassed the Bengaluru police department, a head constable from the Cyber Crime Police Station has been arrested for stealing ₹11 lakh from a car parked right outside the Bengaluru Police Commissioner’s Office.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm