ಬ್ರೇಕಿಂಗ್ ನ್ಯೂಸ್
06-12-25 02:43 pm HK News Desk ಕ್ರೈಂ
ಚಿಕ್ಕಮಗಳೂರು, ಡಿ.06: ಎರಡು ಗುಂಪುಗಳ ನಡುವೆ ಬ್ಯಾನರ್ ವಿಚಾರದಲ್ಲಿ ನಡೆದ ಘರ್ಷಣೆಯಲ್ಲಿ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯ ಗಣೇಶಗೌಡ (38) ಹತ್ಯೆಯಾಗಿದ್ದಾರೆ.
ದತ್ತ ಜಯಂತಿ ಬ್ಯಾನರ್ ತೆರವು ಮಾಡುವ ವಿಚಾರಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತು ಗಣೇಶ್ ನಡುವೆ ಜಗಳ ನಡೆದಿತ್ತು. ಶುಕ್ರವಾರ ತಡರಾತ್ರಿ ಗಣೇಶನನ್ನ ಕಲ್ಮುರುಡೇಶ್ಚರ ಮಠದ ಬಳಿ ಕರೆಸಿಕೊಂಡು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ.
ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಗಣೇಶ್ ಆಕಾಂಕ್ಷಿಯಾಗಿದ್ದರು. ಘರ್ಷಣೆಯಲ್ಲಿ ಎದುರಾಳಿ ಗುಂಪಿನ ಇಬ್ಬರಿಗೆ ಗಾಯಗಳಾಗಿದ್ದು, ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಗಣೇಶ್ ಸಖರಾಯಪಟ್ಟಣ ಭಾಗದಲ್ಲಿ ಪಕ್ಷ ಸಂಘಟಿಸಿದ್ದರು. ಅವರನ್ನು ಕೊಲೆ ಮಾಡಿರುವ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಪೊಲೀಸರು ಬಂಧಿಸಿ ಶಿಕ್ಷೆ ಕೊಡಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಒತ್ತಾಯಿಸಿದರು.
ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ಬಳಿ ಎಸ್‌ಪಿ ವಿಕ್ರಮ್ ಆಮ್ಟೆ ಪ್ರತಿಕ್ರಿಯಿಸಿ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿದೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಗಲಾಟೆಯಲ್ಲಿ ಭಾಗಿಯಾದ ಇಬ್ಬರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಸಖರಾಯಪಟ್ಟಣ ವ್ಯಾಪ್ತಿಯಲ್ಲಿ ಸೂಕ್ತ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಖರಾಯಪಟ್ಟಣ ಬಂದ್ ಮಾಡಿಸಲು ಕಾಂಗ್ರೆಸ್ ಕಾರ್ಯಕರ್ತರ ಸಿದ್ಧತೆ ನಡೆಸಿದ್ದಾರೆ. ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್, ಯೂಥ್ ಕಾಂಗ್ರೆಸ್ ನೇತೃತ್ವದಲ್ಲಿ ಬಂದ್ಗೆ ಕರೆ ನೀಡಲಾಗಿದೆ. ಸಖರಾಯಪಟ್ಟಣ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪೊಲೀಸ್ ಇಲಾಖೆ ಹೈಅಲರ್ಟ್ ಘೋಷಣೆ ಮಾಡಿದೆ. ಸ್ಥಳದಲ್ಲೇ ಅನೇಕರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 4 ಡಿಎಆರ್ ನಿಯೋಜನೆ ಮಾಡಲಾಗಿದೆ.
A violent clash over the removal of a Datta Jayanti banner in Sakharayapatna of Chikkamagaluru district resulted in the brutal murder of a Congress worker and Gram Panchayat member, Ganesh Gowda (38), late Friday night.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
06-12-25 02:43 pm
HK News Desk
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm