ಬ್ರೇಕಿಂಗ್ ನ್ಯೂಸ್
09-12-25 04:33 pm Mangalore Correspondent ಕ್ರೈಂ
ಪುತ್ತೂರು, ಡಿ.9 : ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಚೀಲ ಕಾಫಿಯನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಪ್ರಕರಣ ಬೆನ್ನತ್ತಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪುತ್ತೂರು ಕಬಕ ನಿವಾಸಿ ತೃತೇಶ್ (29) ಎಂಬವರು ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ಡಿ.3ರಂದು ಪಿರಿಯಾಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ಮನೆಗೆ ತೆರಳಿದ್ದರು. ಮರುದಿನ ಡಿ.04ರಂದು ಬೆಳಗ್ಗೆ ಮರಳಿ ಬಂದು ಸದ್ರಿ ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿರುತ್ತಾರೆ.




ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000/-ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡುಬಂದಿತ್ತು. ಈ ಬಗ್ಗೆ ತೃತೇಶ್ ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿ ಆಶ್ಲೇಷ ಭಟ್ ಎಂಬಾತ ತನ್ನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ, ವಿಜಯ ಶೆಟ್ಟಿ ಮತ್ತು ಮಹಮ್ಮದ್ ಅಶ್ರಫ್ ಎಂಬವರೊಂದಿಗೆ ಸೇರಿ ಕೃತ್ಯ ನಡೆಸಿರುವುದು ತಿಳಿದುಬಂದಿರುತ್ತದೆ. ಸದ್ರಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಎರಡು ಆಟೋ, ಒಂದು ಗೂಡ್ಸ್ ಟೆಂಪೋವನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಲಾಗಿದೆ.
A major theft took place in Puttur where 80 bags of coffee worth ₹21.44 lakh were stolen from a lorry parked overnight. The Puttur Police have arrested five accused and recovered the stolen bags along with the vehicles used in the crime.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm