ಬ್ರೇಕಿಂಗ್ ನ್ಯೂಸ್
15-12-25 11:42 am Bangalore Correspondent ಕ್ರೈಂ
ಬೆಂಗಳೂರು, ಡಿ 15 : ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್‌ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಬಂಧಿತರು. ಆರೋಪಿಗಳಿಂದ 45 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಐಷಾರಾಮಿ ಜೀವನ ನಡೆಸಬೇಕೆಂದು ಇಚ್ಚಿಸಿದ್ದ ಮಲ್ಲಿಕಾರ್ಜುನ್‌ಗೆ ಇತರೆ ಆರೋಪಿಗಳು ಸಾಥ್ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ದೂರುದಾರ ನವೀನ್ ಎಂಬವರನ್ನು ಹತ್ತಿರದಿಂದ ಗಮನಿಸಿದ್ದ ಹೃತ್ವಿಕ್, ಆತನ ಮನೆಗೆ ನುಗ್ಗಿದರೆ ಹಣ, ಚಿನ್ನಾಭರಣ ಸಿಗಲಿದೆ ಎಂದು ಮಲ್ಲಿಕಾರ್ಜುನ್‌ನಿಗೆ ತಿಳಿಸಿದ್ದಾನೆ. ಅದರಂತೆ ಡಿಸೆಂಬರ್ 7ರಂದು ಪೊಲೀಸ್ ಸಮವಸ್ತ್ರ ಧರಿಸಿ ನವೀನ್ ಮನೆಗೆ ಕಾರಿನಲ್ಲಿ ಆರೋಪಿಗಳು ಧಾವಿಸಿದ್ದರು. 'ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯಾ, ಮನೆ ಶೋಧ ನಡೆಸಬೇಕು ಎಂದು ಬೆದರಿಸಿ ನವೀನ್ ಅವರ ಮೇಲೆ ಲಾಠಿ, ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದರು. ಬಂಧನ ಮಾಡಬಾರದೆಂದರೆ ಹಣ ಕೊಡಬೇಕು ಎಂದು ಖಾತೆಯಲ್ಲಿದ್ದ 87 ಸಾವಿರ ರೂ., ಬೀರುವನಲ್ಲಿದ್ದ 53 ಸಾವಿರ ರೂ. ಹಾಗೂ ಪರ್ಸ್‌ನಲ್ಲಿದ್ದ 2 ಸಾವಿರ ರೂ. ಪಡೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ 45 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಪಿಎಸ್‌ಐ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಎರಡು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣನಾಗಿರಲಿಲ್ಲ. ಆದರೂ ಸಹ ತಾನು ಉತ್ತೀರ್ಣನಾಗಿ ಪಿಎಸ್‌ಐ ಆಗಿದ್ದೇನೆ ಎಂದು ಊರಿನವರ ಮುಂದೆ ಬಿಂಬಿಸಿಕೊಂಡಿದ್ದ. ಪೊಲೀಸ್ ಸಮವಸ್ತ್ರ, ಲಾಠಿ, ಟೋಪಿ ಹಾಗೂ ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಗ್ರಾಮ ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್‌ಐ ಆಗಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.
In a shocking case of police impersonation, Vidyaranayapura police in Bengaluru have arrested four men, including a fake PSI, for wearing police uniforms, threatening civilians and extorting money.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm