ಬ್ರೇಕಿಂಗ್ ನ್ಯೂಸ್
30-12-25 12:42 pm Mangalore Correspondent ಕ್ರೈಂ
ಮಂಗಳೂರು, ಡಿ.30 : ತುಂಬೆ ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ ದಾಂಧಲೆಗೈದ ಘಟನೆ ನಡೆದಿದ್ದು ಪ್ರಕರಣದಲ್ಲಿ ಇಬ್ಬರನ್ನು ಬಂಟ್ವಾಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು.
ಡಿಸೆಂಬರ್ 29 ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ಧ ಧಿಕ್ಕಿನಿಂದ ಬಂದಿದ್ದು, ಟೋಲ್ ಸಿಬ್ಬಂದಿಗಳು ಟೋಲ್ ಹಣ ಕೇಳಿದಾಗ ಹಣ ನೀಡಲು ನಿರಾಕರಿಸಿ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಟೋಲ್ ಗೇಟಿಗೆ ಹಾನಿ ಮಾಡಿದ್ದಾರೆ. ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಸೇರಿ ಟೋಲ್ ಗೇಟ್ ಸಿಬ್ಬಂದಿಗಳಾದ ಅಂಕಿತ್ ಹಾಗೂ ರೋಹಿತ್ ಎಂಬವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದು ಟೋಲ್ ಬೂತ್ ಒಳಗಡೆ ನುಗ್ಗಿ ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಟೋಲ್ ಇನ್ ಚಾರ್ಜ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು-ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ (25) ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Two individuals have been arrested by Bantwal Police for assaulting toll gate staff at the Brahmarakootlu Toll Gate near Tumbe. The arrested are Bharath (23), a lorry driver, and Tejas (26), a cleaner, both residents of Chikkamagaluru.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm