ಬ್ರೇಕಿಂಗ್ ನ್ಯೂಸ್
31-12-25 05:48 pm Mangalore Correspondent ಕ್ರೈಂ
ಪುತ್ತೂರು, ಡಿ.31 : ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ ಪ್ರಕರಣ ಸಂಬಂಧಿಸಿ ಪುರೋಹಿತ ಕೆಲಸ ಮಾಡುವ ಅರ್ಚಕ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಮುಡೂರು ನಿವಾಸಿ ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯಲ್ಲಿರುವ ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್ ಸ್ವಾತಿ ರಾವ್ (25) ಎಂಬವರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಡಿ.17ರಂದು ಮನೆಗೆ ನುಗ್ಗಿದ ಆರೋಪಿಗಳು ಎ.ವಿ ನಾರಾಯಣ ಮತ್ತು ಅವರ ಪತ್ನಿಯನ್ನು ಬೆದರಿಸಿ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ, ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು ಹೆದರಿಕೆಯಿಂದ ಜೋರಾಗಿ ಕಿರುಚಿದ್ದಾರೆ. ಇದರಿಂದ ಹೆದರಿದ ಆರೋಪಿಗಳು ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿದ್ದಾರೆ. ಮನೆಯಿಂದ ಯಾವುದೇ ಕಳ್ಳತನ ಆಗಿರುವುದಿಲ್ಲ. ಆದರೆ ಯಾರೋ ಇಬ್ಬರು ಸೇರಿ ಕಳವಿಗೆ ಯತ್ನಿಸಿದ್ದಾರೆ ಎಂದು ನಾರಾಯಣ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಆರೋಪಿ ದಂಪತಿಯನ್ನು ಮತ್ತು ಅವರು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದು ಎವಿ ನಾರಾಯಣ ಅವರ ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವ ಬಗ್ಗೆ ಮಾಹಿತಿ ತಿಳಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಹೆಲ್ಮೆಟ್ ಹಾಕಿ ಮನೆಯ ಒಳಗೆ ನುಗ್ಗಿದ್ದು ವೃದ್ಧ ದಂಪತಿ ಬೊಬ್ಬೆ ಹಾಕಿದ್ದರಿಂದ ಅರ್ಧದಲ್ಲಿ ಬಿಟ್ಟು ಪರಾರಿಯಾಗಿದ್ದರು.
A shocking attempted robbery at the residence of retired Vivekananda College principal A.V. Narayana has led to the arrest of a priest and his wife. The incident occurred around midnight on December 17, when two individuals forcibly entered the house and attempted to loot valuables.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm