ಬ್ರೇಕಿಂಗ್ ನ್ಯೂಸ್
31-12-25 07:05 pm Mangalore Correspondent ಕ್ರೈಂ
ಪುತ್ತೂರು, ಡಿ.31 : ಸುಳ್ಯದ ವ್ಯಕ್ತಿಯೊಬ್ಬರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದೊಯ್ದು ಹಲ್ಲೆಗೈದಿದ್ದು ಮರುದಿನ ವ್ಯಕ್ತಿ ಹಲ್ಲೆ ಆಘಾತದಿಂದ ಸಾವನ್ನಪ್ಪಿದ ಘಟನೆ ಸಂಬಂಧಿಸಿ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35) ಎಂಬವರ ದೂರಿನಂತೆ ಈ ಬಗ್ಗೆ ಕೊಲೆ ಪ್ರಕರಣ ದಾಖಲಾಗಿತ್ತು. ಮಹಿಳೆಯ ಗಂಡ ಅಬ್ದುಲ್ ಜಬ್ಬಾರ್ ಎಂಬವರನ್ನು ಅಕ್ಟೋಬರ್ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಮನೆಗೆ ಕಳುಹಿಸಿದ್ದರು. ಮರುದಿನ 17ರಂದು ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಅಬ್ದುಲ್ ಜಬ್ಬಾರ್ ಸಾವಿಗೆ ರಫೀಕ್ ಪಡು ಮತ್ತು ಇತರರು ಹಲ್ಲೆ ನಡೆಸಿದ್ದೇ ಕಾರಣ ಎಂಬುದಾಗಿ ಸುಮಯ್ಯಾ ಅವರು ಅ.18ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 125/2025, ಕಲಂ: 105 ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಅಬ್ದುಲ್ ಜಬ್ಬಾರ್ ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದ್ದರಿಂದ ಸದ್ರಿ ಪ್ರಕರಣವನ್ನು ಕಲಂ: 103 ಜೊತೆಗೆ 3(5) BNS ರಂತೆ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯಾದ ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಎಂಬಾತನನ್ನು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿದ್ದು, ಇನ್ನೋರ್ವ ಆರೋಪಿ ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ ಎಸ್ @ ಮನು (42) ಎಂಬಾತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ, ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Two persons have been arrested by the Sullia Police in connection with the death of a man who was allegedly taken out on the pretext of renting a car, assaulted brutally, and later died due to the injuries sustained.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm