ಬ್ರೇಕಿಂಗ್ ನ್ಯೂಸ್
12-01-26 01:54 pm Mangaluru Staffer ಕ್ರೈಂ
ಮಂಗಳೂರು, ಜ.11: ಬಾಂಗ್ಲಾದೇಶದವನು ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆ ನಡೆಸಿದ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಕುಳೂರು ಚರ್ಚ್ ಬಳಿ ನಡೆದಿದ್ದು ಘಟನೆ ಸಂಬಂಧಿಸಿ ನಾಲ್ವರು ಹಿಂದು ಯುವಕರ ಮೇಲೆ ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಎಂಬಾತ ಕಳೆದ 10–15 ವರ್ಷಗಳಿಂದ ಮಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದು ತನ್ನ ಇನ್ನೊಬ್ಬ ಗೆಳೆಯನ ಜೊತೆಗೆ ಕುಳೂರಿನಲ್ಲಿ ನೆಲೆಸಿದ್ದ. ಈತನಿಗೆ ಸ್ಥಳೀಯರಾದ ನಾಲ್ವರು ಆರೋಪಿಗಳು ಕಳೆದ 5-6 ತಿಂಗಳಿನಿಂದ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಹೇಳಿ ಹಲ್ಲೆ ನಡೆಸುತ್ತಿದ್ದರು. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ.
ನಿನ್ನೆ ಭಾನುವಾರ ಸಂಜೆ ಮತ್ತೆ ದಿಲ್‌ಜಾನ್ ಅನ್ಸಾರಿ ಮೇಲೆ ಹಲ್ಲೆ ನಡೆಸಿದ್ದು ತಲೆಗೆ ಪೆಟ್ಟು ಬಿದ್ದು ರಕ್ತ ಬಂದಿದೆ. ಈ ವೇಳೆ, ಸ್ಥಳೀಯ ಹಿಂದು ಮಹಿಳೆಯರು ರಕ್ಷಿಸಿ ಹೊಡೆಯದಂತೆ ತಡೆದಿದ್ದಾರೆ. ಆದರೆ ದುಷ್ಕರ್ಮಿಗಳ ಭಯದಿಂದ ಪೊಲೀಸರಿಗೆ ದೂರು ನೀಡಲು ಹಿಂಜರಿದಿದ್ದ. ಈ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಲಸೆ ಕಾರ್ಮಿಕನನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧಿಸಿ ಹಲ್ಲೆಗೀಡಾದ ವ್ಯಕ್ತಿಯಿಂದ ಮಾಹಿತಿ ಪಡೆದು ದೂರು ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
A case of attempted murder has been registered at the Kavoor Police Station against four youths from Kuloor for allegedly assaulting a migrant labourer after accusing him of being a Bangladeshi national. The incident occurred near Kuloor Church under the Kavoor police limits. The accused have been identified as Sagar, Dhanush, Lalu alias Ratheesh, and Mohan, all residents of Kuloor. Police have launched a manhunt to arrest the accused.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm