ಬ್ರೇಕಿಂಗ್ ನ್ಯೂಸ್
15-01-26 03:01 pm Mangalore Correspondent ಕ್ರೈಂ
ಮಂಗಳೂರು, ಜ.15 : ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ (15) ನಿಗೂಢ ಸಾವಿನ ಪ್ರಕರಣದಲ್ಲಿ ಪೋಸ್ಟ್ ಮಾರ್ಟಮ್ ವರದಿ ಆಧರಿಸಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದು ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಶವದ ಪೋಸ್ಟ್ ಮಾರ್ಟಮ್ ಪರೀಕ್ಷೆಯ ಪ್ರಾಥಮಿಕ ವರದಿಯ ಪ್ರಕಾರ, ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ನೀರಿನಲ್ಲಿ ಮುಳುಗಿದ್ದೇ ತಕ್ಷಣದ ಸಾವಿಗೆ ಕಾರಣವಾಗಿರುತ್ತದೆ ಎಂದು ತಿಳಿಸಿದೆ. ತಲೆಯ ಮೇಲಿರುವ ಗಾಯಗಳು ಮಂದ ಬಲದ ಗಾಯವಾಗಿದ್ದು (Blunt injury) ಮತ್ತು ಯಾವುದೇ ಚೂಪಾದ ಆಯುಧಗಳಿಂದ ಅಥವಾ ಬಾವಿ ಒಳಗಡೆ ಬಿದ್ದ ಸಂದರ್ಭದಲ್ಲಿ ಆಗಿರುವ ಗಾಯಗಳಲ್ಲ ಎಂಬ ನೆಲೆಯಲ್ಲಿ ಪ್ರಾಥಮಿಕ ಮಾಹಿತಿಗಳಿವೆ.
ಹೀಗಾಗಿ, ತಲೆಯ ಮೇಲೆ ಆಗಿರುವ ಮಂದ ಬಲದ ಗಾಯ ಹೇಗೆ ಆಗಿದೆ ಎನ್ನುವ ಬಗ್ಗೆ ಪರೀಕ್ಷೆಯಲ್ಲಿ ಸಮರ್ಥನೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್ಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.
ಜ.14ರಂದು ಬೆಳಗ್ಗೆ ಧನುಪೂಜೆಗೆಂದು ಸುಮಂತ್ ಬೆಳಗ್ಗೆ 5 ಗಂಟೆಗೆ ಎದ್ದು ದೇವಸ್ಥಾನಕ್ಕೆ ಹೊರಟಿದ್ದ. ವಾರದಲ್ಲೊಮ್ಮೆ ಪೂಜೆಗೆ ತೆರಳುವ ವಾಡಿಕೆ ಮಾಡಿಕೊಂಡಿದ್ದ. ಆದರೆ ನಿನ್ನೆ ಬೆಳಗ್ಗೆ ದೇವಸ್ಥಾನಕ್ಕೆ ಹೋದವನು ಮರಳಿ ಮನೆಗೆ ಬಂದಿರಲಿಲ್ಲ. ಮನೆಯವರು ಬಳಿಕ ಹುಡುಕಾಟ ನಡೆಸಿದಾಗ ಮನೆಯಿಂದ 500 ಮೀಟರ್ ದೂರದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಶವವನ್ನು ಬಾವಿಯಿಂದ ಮೇಲೆತ್ತಿದಾಗ ತಲೆಯಲ್ಲಿ ಗಾಯದ ಗುರುತುಗಳಿದ್ದವು. ಹೀಗಾಗಿ ಏನೋ ಅಸಹಜ ಆಗಿರಬೇಕೆಂಬ ಶಂಕೆ ವ್ಯಕ್ತವಾಗಿತ್ತು. ಅಲ್ಲದೆ, ಬಾಲಕ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಗಳು ಇರಲಿಲ್ಲ ಎನ್ನಲಾಗಿದೆ. ಸ್ಥಳೀಯರು ಬಾಲಕನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರಿಂದ ಎಸ್ಪಿ ಮತ್ತು ಐಜಿಪಿ ಸ್ಥಳಕ್ಕೆ ತೆರಳಿ ಅಹವಾಲು ಆಲಿಸಿದ್ದರು.
The mysterious death of 15-year-old Sumant from Odilnala village under Belthangady police limits has been registered as a murder case following crucial findings in the postmortem report. According to the preliminary report, the boy was alive when he fell into the well, and drowning was the immediate cause of death.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm