ಬ್ರೇಕಿಂಗ್ ನ್ಯೂಸ್
19-01-26 10:20 pm HK News Desk ಕ್ರೈಂ
ಹೈದರಾಬಾದ್, ಜ.19 : ಸುಮಾರು 100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಸಿಲುಕಿಸಿ, ಅವರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ ಲಕ್ಷಾಂತರ ರೂ. ಹಣ ವಸೂಲಿ ಮಾಡುತ್ತಿದ್ದ ದಂಪತಿಯನ್ನು ತೆಲಂಗಾಣದ ಕರೀಮ್ ನಗರ ಪೊಲೀಸರು ಬಂಧಿಸಿದ್ದಾರೆ.
ಹಣದ ಆಸೆಗಾಗಿ ಇವರು ಹಲವಾರು ಪುರುಷರನ್ನು ಟಾರ್ಗೆಟ್ ಮಾಡಿ ಜಾಲ ಬೀಸುತ್ತಿದ್ದರು. ಪತಿಯ ಮಾರ್ಬಲ್ ಮತ್ತು ಇಂಟೀರಿಯರ್ ಡೆಕೋರೇಶನ್ ವ್ಯವಹಾರದಲ್ಲಿ ಭಾರೀ ನಷ್ಟ ಉಂಟಾಗಿತ್ತು. ತಾವು ಖರೀದಿಸಿದ್ದ ಫ್ಲಾಟ್‌ನ ಇಎಂಐ ಪಾವತಿಸಲು ಹಣವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿ, ಸುಲಭವಾಗಿ ಹಣ ಸಂಪಾದಿಸಲು ಈ ಹಾದಿ ಹಿಡಿದಿದ್ದರು. ಯೋಜನೆಯಂತೆ ಪತ್ನಿಯ ಅರೆನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದರು.ಗ್ರಾಹಕರು ಮನೆಗೆ ಬಂದಾಗ, ಪತಿ ರಹಸ್ಯ ಕ್ಯಾಮೆರಾಗಳ ಮೂಲಕ ಅಪರಿಚಿತ ಪುರುಷರು ಪತ್ನಿಯೊಂದಿಗೆ ಇರುವ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದ. ನಂತರ ಆ ವಿಡಿಯೋಗಳನ್ನು ತೋರಿಸಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದರು.
ಕಳೆದ ನಾಲ್ಕು ವರ್ಷಗಳಿಂದ ಈ ದಂಧೆ ನಡೆಸುತ್ತಿದ್ದ ದಂಪತಿ, ಸುಮಾರು 60 ಲಕ್ಷ ರೂ. ಹಣವನ್ನು ಲೂಟಿ ಮಾಡಿದ್ದರು. ಈ ಹಣದಿಂದ ಅವರು ಒಂದು ಫ್ಲಾಟ್ ಮತ್ತು ಕಾರನ್ನು ಖರೀದಿಸಿದ್ದು, ಅವುಗಳನ್ನು ಪೊಲೀಸರು ಈಗ ಜಪ್ತಿ ಮಾಡಿದ್ದಾರೆ.
ಇತ್ತೀಚೆಗೆ ದಂಪತಿ ತಮ್ಮ ಹಳೆಯ ಗ್ರಾಹಕರೊಬ್ಬರಿಗೆ ಮತ್ತೆ ಕಿರುಕುಳ ನೀಡಲಾರಂಭಿಸಿದ್ದರು. ಈಗಾಗಲೇ ಆ ವ್ಯಕ್ತಿಯಿಂದ 12 ಲಕ್ಷ ವಸೂಲಿ ಮಾಡಿದ್ದ ದಂಪತಿ, ಮತ್ತೆ 5 ಲಕ್ಷ ನೀಡುವಂತೆ ಪಟ್ಟು ಹಿಡಿದಿದ್ದರು. ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು.
ಇದರಿಂದ ನೊಂದ ಸಂತ್ರಸ್ತ ವ್ಯಕ್ತಿ ತಮ್ಮ ಸ್ನೇಹಿತರ ಬಳಿ ವಿಷಯ ತಿಳಿಸಿದ್ದಾರೆ. ಸ್ನೇಹಿತರ ಸಲಹೆಯಂತೆ ಪೊಲೀಸ್ ದೂರು ದಾಖಲಿಸಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ದಂಪತಿಯನ್ನು ಬಂಧಿಸಿದ್ದಾರೆ.
Telangana police have arrested a couple from Karimnagar for allegedly honey-trapping more than 100 men over four years and extorting nearly ₹60 lakh. The husband allegedly used his wife to lure victims through social media, secretly recorded private moments, and blackmailed them for money. The scam came to light after a victim, already extorted of ₹12 lakh, was threatened again and approached the police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm