ಬ್ರೇಕಿಂಗ್ ನ್ಯೂಸ್
22-01-26 10:12 pm Mangalore Correspondent ಕ್ರೈಂ
ಮಂಗಳೂರು, ಜ.22 : 1997 ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನನ್ನು ಮಂಗಳೂರಿನ ಉರ್ವಾ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ. ದಂಡುಪಾಳ್ಯ ಗ್ಯಾಂಗ್ ಸದಸ್ಯ, ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ(55) ಎಂಬಾತ ಬಂಧಿತ ವ್ಯಕ್ತಿ.
ಉರ್ವಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ ನಂಬ್ರ 113/1997, ಕಲಂ 460, 396, 400 ಐಪಿಸಿ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ಸಹಚರ (ಎ-6) ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ (55) ಬಂಧಿತನಾಗಿದ್ದು ಈತ ಮೂಲತಃ ಬೆಂಗಳೂರಿನ ಹೊಸಕೋಟೆ ತಾಲೂಕಿನ ದಂಡುಪಾಳ್ಯದ ನಿವಾಸಿಯಾಗಿದ್ದು ಹಾಲಿ ಆಂದ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ವಿಜಯನಗರ ಕಾಲೋನಿ, ಬಿ.ಕೆ ಪಳ್ಳಿ, ಮದನಪಳ್ಳಿ ಎಂಬಲ್ಲಿ ವಾಸವಿದ್ದ. ಈತನನ್ನು ಮಂಗಳೂರಿನ ಉರ್ವಾ ಪೊಲೀಸರು ಅನ್ನಮಯ್ಯ ಜಿಲ್ಲೆಯ ಮದನಪಳ್ಳಿ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಇಬ್ಬರನ್ನು ಕೊಲೆಗೈದು ಚಿನ್ನಾಭರಣ ದೋಚಿದ್ದರು
1997ರ ಅಕ್ಟೋಬರ್ 11ರಂದು ಮಧ್ಯರಾತ್ರಿ ಮಂಗಳೂರು ತಾಲೂಕು ಉರ್ವಾ ಮಾರಿಗುಡಿ ಕ್ರಾಸ್ ಬಳಿಯಿರುವ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ಸಹಚರರಾದ ದೊಡ್ಡ ಹನುಮ @ ಹನುಮ, ವೆಂಕಟೇಶ @ ಚಂದ್ರ, ಮುನಿಕೃಷ್ಣ @ ಕೃಷ್ಣ, ನಲ್ಲತಿಮ್ಮ @ ತಿಮ್ಮ, ಕೃಷ್ಣ @ ದಂಡುಪಾಳ್ಯ ಕೃಷ್ಣ @ ನಾಗರಾಜ, ಚಿಕ್ಕ ಹನುಮ, ಕೃಷ್ಣಾಡು @ ಕೃಷ್ಣ, ವೆಂಕಟೇಶ್ @ ರಮೇಶ್ ಎಂಬ ಎಂಟು ಮಂದಿ ಸೇರಿ ಮನೆಯಲ್ಲಿದ್ದ ಶ್ರೀಮತಿ ಲೂವಿಸ್ ಡಿಮೆಲ್ಲೋ(80) ಹಾಗೂ ರಂಜಿತ್ ವೇಗಸ್ (19) ಅವರನ್ನು ಕೊಲೆ ಮಾಡಿ ಚಿನ್ನಾಭರಣಗಳ್ನು ದೋಚಿಕೊಂಡು ಹೋಗಿದ್ದರು. ಸದ್ರಿ ಆರೋಪಿಗಳ ಮೇಲೆ ತನಿಖೆ ನಡೆಸಿದ ಅಂದಿನ ಪೊಲೀಸರು ದೋಷರೋಪಣಾ ಪಟ್ಟಿಯನ್ನ ಸಲ್ಲಿಸಿದ್ದರು. ಬೆಂಗಳೂರಿನ 34ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಧೀಶರು (ವಿಶೇಷ ನ್ಯಾಯಾಲಯ) ಎಸ್.ಸಿ ನಂ. 728/2010 ರಂತೆ ಸದ್ರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ದೊಡ್ಡ ಹನುಮ ಸೇರಿ ಇತರೆ 5 ಆಪಾದಿತರು ದೋಷಿ ಎಂದು ತೀರ್ಪು ನೀಡಿರುತ್ತದೆ.
ಆದರೆ ಪ್ರಕರಣದಲ್ಲಿ ಆಪಾದಿತನಾದ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ತನ್ನ ಹೆಸರು ಬದಲಿಸಿಕೊಂಡು ದಸ್ತಗಿರಿಗೆ ಸಿಗದೇ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಆಂಧ್ರಪ್ರದೇಶ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ. ಈತನ ಮೇಲೆ ಮಂಗಳೂರು ಮಾನ್ಯ JMFC 2ನೇ ನ್ಯಾಯಾಲಯವು 2010 ರಲ್ಲಿ LPC ವಾರೆಂಟ್ ಹೊರಡಿಸಿತ್ತು. ಈತನ ಮೇಲೆ ಕರ್ನಾಟಕ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದ್ದು ಇನ್ನಷ್ಟು ಪ್ರಕರಣ ಇದೆಯಾ ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕ ಶ್ಯಾಮಸುಂದರ್ ಹೆಚ್.ಎಂ, ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ಎಲ್.ಮಂಜುಳಾ, ಎಎಸ್ಐ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತಲಕ್ಷ್ಮಿ, ಅನಿಲ್, ಪ್ರಮೋದ್, ಆತ್ನಾನಂದ , ಹರೀಶ್ ಶ್ರಮಿಸಿರುತ್ತಾರೆ. ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಪ್ರಶಂಸೆ ವ್ಯಕ್ತಪಡಿಸಿದ್ದು, ಹೆಚ್ಚಿನ ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿ&ಐಜಿಪಿ ಅವರಿಗೆ ಶಿಫಾರಸ್ಸು ಮಾಡಿದ್ದಾರೆ.
Mangaluru’s Urwa police have arrested a notorious Dandupalya gang member who had been absconding for 29 years in connection with a double murder and robbery case from 1997. The accused was traced and nabbed in Andhra Pradesh.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm