ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ; ವೇಣೂರು ಮರೋಡಿಯಲ್ಲಿ ಘಟನೆ, ಹಲ್ಲೆಗೈದ ಎಂಟು ಜನರ ಬಂಧನ

23-01-26 09:36 pm       Mangaluru Staffer   ಕ್ರೈಂ

ಬೈಕ್ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಮಂಗಳೂರು, ಜ.23: ಬೈಕ್ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಮಂಗಳೂರಿನ ಕುಳೂರು ನಿವಾಸಿ ಮೊಯಿದ್ದೀನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ.‌ ಮರೋಡಿ ಗ್ರಾಮದ ನಿವಾಸಿ ದೇವಿಪ್ರಸಾದ್ ಎಂಬವರ ಬೈಕನ್ನು ಕದ್ದು ಪರಾರಿಯಾಗುತ್ತಿದ್ದ ಸಂದರ್ಭ ಆರೋಪಿಗಳನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದಿದ್ದಾರೆ.‌ ಈ ವೇಳೆ, ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದರೆಂದು ಸ್ಥಳೀಯರು ಸೇರಿ ಇಬ್ಬರನ್ನೂ ಥಳಿಸಿ ಮರಕ್ಕೆ ಕಟ್ಟಿ ಹಾಕಿದ್ದಾರೆ. 

ವಿಷಯ ತಿಳಿದು ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ‌ವೇಣೂರು ಪೊಲೀಸ್ ಠಾಣೆಯಲ್ಲಿ ಬೈಕ್ ಕಳವು ಯತ್ನ ವಿಚಾರದಲ್ಲಿ ಅಬ್ದುಲ್ ಸಮದ್ ಮತ್ತು ಮೊಯಿದ್ದೀನ್ ವಿರುದ್ದ BNS ಕಲಂ 303(2), 307 ಅಡಿ ಪ್ರಕರಣ ದಾಖಲಾಗಿದೆ. ‌ಇದಲ್ಲದೆ, ಇವರ ಮೇಲೆ‌ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹಲ್ಲೆ ನಡೆಸಿದ ಆರೋಪದಲ್ಲಿ ಸ್ಥಳೀಯರಾದ ಬಾಚು, ನಿಶಿತ್, ನರೇಶ್ ಅಂಚನ್, ರತ್ನಾಕರ, ಸ್ವಸ್ತಿಕ್, ದೇವಿಪ್ರಸಾದ್, ಸುಧೀರ್, ಚಂದಪ್ಪ ಎಂಬವರ ವಿರುದ್ದ BNS ಕಾಯಿದೆ ಕಲಂ 189(2), 191(2), 191(3), 352, 115(2), 118(1), 351(2) ,190 ಅಡಿ ಪ್ರಕರಣ ದಾಖಲಿಸಲಾಗಿದೆ. ‌

In a disturbing incident of mob violence, two men accused of attempting to steal a motorcycle were tied to a tree and assaulted by locals at Palaragoli in Marodi village of Belthangady taluk. The incident occurred late on the night of January 20 and came to light later.