ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರಿತದಿಂದ ತಂದೆ ಗಂಭೀರ, ಅಪ್ರಾಪ್ತ ಬಾಲಕ ಕೋವಿಯಿಂದ ಗುಂಡು ಹಾರಿಸಿಕೊಂಡು ಸಾವು 

24-01-26 11:18 pm       Mangaluru Staffer   ಕ್ರೈಂ

ಅಪ್ಪ- ಮಗನ ಮಧ್ಯೆ ಜಗಳ ನಡೆದು ತಂದೆ ಚೂರಿ ಇರಿತಕ್ಕೊಳಗಾಗಿದ್ದರೆ, ಅಪ್ರಾಪ್ತ ಬಾಲಕ ಮಗ ಕೋವಿಯಿಂದ ಗುಂಡು ಹಾರಿಸಲ್ಪಟ್ಟು ಮೃತಪಟ್ಟ ಘಟನೆ ಕಡಬ ಬಳಿಯ ರಾಮಕುಂಜದಲ್ಲಿ ನಡೆದಿದೆ. 

ಪುತ್ತೂರು, ಜ.24: ಅಪ್ಪ- ಮಗನ ಮಧ್ಯೆ ಜಗಳ ನಡೆದು ತಂದೆ ಚೂರಿ ಇರಿತಕ್ಕೊಳಗಾಗಿದ್ದರೆ, ಅಪ್ರಾಪ್ತ ಬಾಲಕ ಮಗ ಕೋವಿಯಿಂದ ಗುಂಡು ಹಾರಿಸಲ್ಪಟ್ಟು ಮೃತಪಟ್ಟ ಘಟನೆ ಕಡಬ ಬಳಿಯ ರಾಮಕುಂಜದಲ್ಲಿ ನಡೆದಿದೆ. 

ರಾಮಕುಂಜ ಗ್ರಾಮದ ವಸಂತ್ ಅಮೀನ್ ಎಂಬವರ ಪುತ್ರ ಮೋಕ್ಷ (17) ಎಂಬ ಬಾಲಕ ಮೃತಪಟ್ಟಿದ್ದರೆ, ತಂದೆ ಚೂರಿ ಇರಿತದಿಂದ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಸಂಜೆ ಹೊತ್ತಿಗೆ ಮನೆಯಲ್ಲಿ ತಂದೆ- ಮಗನ ನಡುವೆ ಸಂಘರ್ಷ ನಡೆದಿರುವ ಬಗ್ಗೆ ಅನುಮಾನಗಳಿದ್ದು, ಈ ವೇಳೆ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಈ ವೇಳೆ, ಬಾಲಕನೇ ಶೂಟ್ ಮಾಡಿಕೊಂಡಿದ್ದಾನೆಯೇ ಅಥವಾ ತಂದೆ ಮಗನಿಗೆ ಶೂಟ್ ಮಾಡಿದ್ದು ಕೊಂದಿದ್ದಾ ಎಂಬ ಬಗ್ಗೆ ಅನುಮಾನ ಇದೆ. 

ವಸಂತ ಅಮೀನ್ ಅವರು ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಜಾಗ ಖರೀದಿಸಿ ಮನೆ ಮಾಡಿಕೊಂಡಿದ್ದು ತಂದೆ, ಮಗ ಜೊತೆಯಾಗಿ ವಾಸವಿದ್ದರು. ಮಗ ಮೋಕ್ಷ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ. ಸ್ಥಳಕ್ಕೆ ಕಡಬ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಸಂತ ಅಮೀನ್ ವಿರುದ್ಧ ಅವರ ಪತ್ನಿ ಜಯಶ್ರೀ ದೂರು ದಾಖಲಿಸಿದ್ದು, ಮಗನನ್ನು ವಸಂತ ಶೂಟ್ ಮಾಡಿ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಪತ್ನಿ ಜಯಶ್ರೀ ಪತಿಯೊಂದಿಗೆ ಮನಸ್ತಾಪಗೊಂಡು ಮಂಗಳೂರಿನ ತನ್ನ ತಾಯಿ ಮನೆಯಲ್ಲಿದ್ದರು. ಕಳೆದ ಒಂದು ವರ್ಷದಿಂದ ಮನೆಯಲ್ಲಿ ತಂದೆ ಮತ್ತು ಮಗ ಮಾತ್ರ ಇದ್ದರು ಎಂದು ಹೇಳಲಾಗುತ್ತಿದೆ.

A domestic dispute between a father and his minor son ended in tragedy at Ramakunja village near Kadaba on Friday, with the 17-year-old boy dying of a gunshot wound, while the father sustained serious injuries after being stabbed. The deceased has been identified as Moksha (17), son of Vasanth Ameen, a resident of Ramakunja village. Vasanth Ameen was critically injured in a knife attack and has been admitted to a hospital in Mangaluru for treatment.