ಬ್ರೇಕಿಂಗ್ ನ್ಯೂಸ್
26-01-26 03:03 pm HK News Desk ಕ್ರೈಂ
ನವದೆಹಲಿ, ಜ.26: ಗಣರಾಜ್ಯೋತ್ಸವ ಆಚರಣೆಗೆ ಉಗ್ರರ ಬೆದರಿಕೆ ನಡುವೆಯೇ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ 10,000 ಕೆಜಿ ಸ್ಫೋಟಕಗಳು ಮತ್ತು ಡಿಟೋನೇಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧಿತ ಸ್ಫೋಟಕಗಳು ಎನ್ನುವ ಮಾಹಿತಿ ಇದ್ದರೂ, ದೊಡ್ಡ ಪ್ರಮಾಣದಲ್ಲಿ ಶೇಖರಣೆ ಮಾಡಿರುವುದು ಶಂಕೆಗೆ ಕಾರಣವಾಗಿದೆ. ಈ ಭಾಗದಲ್ಲಿ ದೊಡ್ಡ ಮಟ್ಟದ ಸ್ಮಗ್ಲಿಂಗ್ ನೆಟ್ವರ್ಕ್ ಕಾರ್ಯಾಚರಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು.
ಅಕ್ರಮ ಗಣಿಗಾರಿಕೆ ಸಂಬಂಧಿತ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ರಾಜಸ್ಥಾನದ ವಿಶೇಷ ತನಿಖಾ ತಂಡದ ಪೊಲೀಸರು ತೋಟದ ಮನೆಯೊಂದರಲ್ಲಿ 10 ಸಾವಿರ ಕೆಜಿ ಸ್ಫೋಟಕಗಳು ಹಾಗೂ ಡಿಟೋನೇಟರ್‌ಗಳನ್ನ ವಶಪಡಿಸಿಕೊಂಡಿದ್ದು, ಓರ್ವನನ್ನ ಬಂಧಿಸಿದ್ದಾರೆ. ಹರ್ಸೌರ್ ಗ್ರಾಮದ ನಿವಾಸಿ ಸುಲೇಮಾನ್ ಖಾನ್ ಎಂಬಾತ ಬಂಧಿತ ಆರೋಪಿ.
ಪೊಲೀಸರು ಹರ್ಸೌರ್ ಏರಿಯಾದ ತೋಟದ ಮನೆಯೊಂದರ ಮೇಲೆ ದಾಳಿ ಮಾಡಿದಾಗ 187 ಚೀಲಗಳಲ್ಲಿ ತುಂಬಿಟ್ಟಿದ್ದ ಒಟ್ಟು 9,550 ಕೆಜಿ ಅಮೋನಿಯಂ ನೈಟ್ರೇಟ್, ಡಿಟೋನೇಟರ್ ಸೇರಿ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿದ್ದಾರೆ. ಇದರಲ್ಲಿ 9 ಪೆಟ್ಟಿಗೆಗಳಲ್ಲಿ ಡಿಟೋನೇಟರ್‌ಗಳು, 15 ಬಂಡಲ್‌ಗಳಷ್ಟು ನೀಲಿ ಫ್ಯೂಸ್ ವೈರ್, 12 ಪೆಟ್ಟಿಗೆಯಲ್ಲಿ ಕೆಂಪು ಫ್ಯೂಸ್ ವೈರ್ ಗಳನ್ನೂ ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ಸುಲೇಮಾನ್ ಖಾನ್ ಎಂಬಾತನನ್ನ ಬಂಧಿಸಲಾಗಿದೆ. ಆತನ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳಿದ್ದು ಸ್ಫೋಟಕ ಸಾಮಗ್ರಿಗಳ ಸಂಗ್ರಹದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿ, ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸ್ಫೋಟಕ ಸಾಮಗ್ರಿಗಳನ್ನು ಪೂರೈಸುತ್ತಿದ್ದ. ಮಾರುಕಟ್ಟೆಯಲ್ಲಿ ಕೋಟ್ಯಂತರ ಬೆಲೆ ಇರುವ ಸಾಮಗ್ರಿಗಳನ್ನು ಪೂರೈಕೆ ಮಾಡುತ್ತಿದ್ದವರು, ಈತನ ಅಕ್ರಮ ಚಟುವಟಿಕೆ ಬಗ್ಗೆ ಕೇಂದ್ರ ತನಿಖಾ ಏಜನ್ಸಿಗಳು ತನಿಖೆ ನಡೆಸಲಿವೆ.
Amid heightened security and terror alerts during Republic Day celebrations, police in Rajasthan have seized nearly 10,000 kilograms of explosives and detonators from Nagaur district, raising serious security concerns.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
26-01-26 05:05 pm
HK News Desk
ರೌಡಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ; ಪೊಲೀಸರ ಕೈಗೆ...
24-01-26 11:23 pm
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
26-01-26 03:03 pm
HK News Desk
ಅಮಾನ್ಯ ನೋಟಿನ 400 ಕೋಟಿ ದರೋಡೆ ಪ್ರಕರಣ ; ಗುಜರಾತ್...
25-01-26 10:11 pm
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm