ಬ್ರೇಕಿಂಗ್ ನ್ಯೂಸ್
31-01-26 12:12 pm Hk News Staffer ಕ್ರೈಂ
ಬೆಂಗಳೂರು, ಜ.31: ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್ಫರ್ಡ್ ಟೌನ್ನಲ್ಲಿರುವ ಕಂಪನಿ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲೇ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವುದು ಉದ್ಯಮ ವಲಯದಲ್ಲಿ ಆಘಾತ ಮೂಡಿಸಿದೆ.
ಕಳೆದೊಂದು ವಾರದಿಂದ ರಾಯ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಶುಕ್ರವಾರ ಬೆಳಗ್ಗೆಯೂ ಐಟಿ ಪರಿಶೀಲನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಅವರು ಮಾನಸಿಕವಾಗಿ ನೊಂದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಇದರಿಂದ ಒತ್ತಡಕ್ಕೊಳಗಾಗಿ ತನ್ನಲ್ಲಿದ್ದ ಪಿಸ್ತೂಲ್ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮೂಲತಃ ಕೇರಳದ ಕೊಚ್ಚಿಯವರಾಗಿದ್ದ ಸಿ.ಜೆ. ರಾಯ್, ಬೆಂಗಳೂರಿನಲ್ಲಿ ಬೆಳೆದಿದ್ದರು. ಕೊಚ್ಚಿಯ ಕ್ರೈಸ್ತ ಕುಟುಂಬದಿಂದ ಬಂದಿರುವ ಅವರು, ಫ್ರಾನ್ಸ್, ಸ್ವಿಟ್ಜರ್ಲ್ಯಾಂಡ್ ಸೇರಿದಂತೆ ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಅವರಿಗೆ ಪತ್ನಿ ಲಿನಿ ರಾಯ್, ಪುತ್ರ ರೋಹಿತ್ ಹಾಗೂ ಪುತ್ರಿ ರಿಯಾ ಇದ್ದಾರೆ. 2006ರ ವರೆಗೆ ಹ್ಯಾವ್ಲೆಟ್ ಪ್ಯಾಕರ್ಡ್ (HP) ಕಂಪನಿಯಲ್ಲಿ ಕೆಲಸ ಮಾಡಿದ್ದ ರಾಯ್, ನಂತರ ಕಾನ್ಫಿಡೆಂಟ್ ಗ್ರೂಪ್ ಮೂಲಕ ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಕಾಲಿಟ್ಟರು. ಬೆಂಗಳೂರು, ಕೇರಳ, ಗಲ್ಫ್ ರಾಷ್ಟ್ರಗಳಲ್ಲಿ ರಿಯಲ್ ಎಸ್ಟೇಟ್ ಸೇರಿದಂತೆ ಹೋಟೆಲ್, ರೆಸಾರ್ಟ್, ಶಿಕ್ಷಣ ಸಂಸ್ಥೆಗಳ ಕ್ಷೇತ್ರದಲ್ಲಿ ಬಂಡವಾಳ ಹೂಡಿ ಉದ್ಯಮ ವಿಸ್ತರಿಸಿದ್ದರು. ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿದ್ದ ಅವರು ದೇಶದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು.
ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸುಮಾರು 43 ಲಕ್ಷ ಚದರ ಅಡಿ ವಿಸ್ತೀರ್ಣದ ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದ ಅವರು, 150ಕ್ಕೂ ಹೆಚ್ಚು ದೊಡ್ಡ ಯೋಜನೆಗಳನ್ನು ಕೈಗೊಂಡಿದ್ದರು. ತಮ್ಮ ವ್ಯಾಪಾರ ಜಾಲ ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಿಗೂ ವಿಸ್ತರಿಸಿದ್ದರೂ, ಅದನ್ನು ಸಾರ್ವಜನಿಕವಾಗಿ ಹೆಚ್ಚು ಪ್ರಚಾರಕ್ಕೆ ತರುವುದನ್ನು ತಪ್ಪಿಸಿಕೊಂಡಿದ್ದರು. ತಮ್ಮ ಸಂಸ್ಥೆಗೆ ಬ್ರ್ಯಾಂಡ್ ಅಂಬಾಸಿಡರ್ಗಳನ್ನಾಗಲಿ, ಸೆಲೆಬ್ರಿಟಿಗಳ ಜಾಹೀರಾತನ್ನಾಗಲಿ ಬಳಸದೇ, ತಾವೇ ಸಂಸ್ಥೆಯ ಮುಖವಾಗಿದ್ದರು.
ವೈಭವದ ಜೀವನಶೈಲಿಗೆ ಹೆಸರಾದ ಸಿ.ಜೆ. ರಾಯ್, ದುಬೈ ಹಾಗೂ ಭಾರತದಲ್ಲಿ ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳ ಸಂಗ್ರಹ ಹೊಂದಿದ್ದರು. ಜೊತೆಗೆ ಸಾಮಾಜಿಕ ಹೊಣೆಗಾರಿಕೆಗೆ ಒತ್ತು ನೀಡುತ್ತಿದ್ದ ಅವರು, ಬಡವರಿಗೆ ನೆರವು, ವಿದ್ಯಾರ್ಥಿಗಳಿಗೆ ಶಿಷ್ಯವೃತ್ತಿ ಸೇರಿದಂತೆ ಹಲವು ದಾನಧರ್ಮ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಇತ್ತೀಚೆಗೆ 201 ವಿದ್ಯಾರ್ಥಿಗಳಿಗೆ ಶಿಕ್ಷಣ ಶಿಷ್ಯವೇತನ ನೀಡಿದ್ದುದಾಗಿ ತಿಳಿದುಬಂದಿದೆ.
ಯುವ ಉದ್ಯಮಿಗಳಿಗೆ ಸ್ಫೂರ್ತಿಯಾಗಿದ್ದ ರಾಯ್, ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯವಹಾರ, ಯಶಸ್ಸು ಮತ್ತು ಜೀವನ ಕುರಿತು ಪ್ರೇರಣಾತ್ಮಕ ಸಂದೇಶಗಳನ್ನು ನೀಡುತ್ತಿದ್ದರು. ಇಂತಹ ವ್ಯಕ್ತಿಯ ಆತ್ಮಹತ್ಯೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಐಟಿ ಪರಿಶೀಲನೆ, ಮಾನಸಿಕ ಒತ್ತಡ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.
ಪ್ರಭಾವಿ ಶಾಸಕರ ಲಿಂಕ್, ಖ್ಯಾತ ನಟಿಯ ಸಂಪರ್ಕ !
ಪೊಲೀಸ್ ಮೂಲಗಳ ಪ್ರಕಾರ, ಸಿ.ಜೆ. ರಾಯ್ ಅವರಿಗೆ ಪ್ರತಿದಿನ ಡೈರಿ ಬರೆಯುವ ಅಭ್ಯಾಸವಿದ್ದು, ಆ ಡೈರಿಯಲ್ಲಿ ಹಲವು ಪ್ರಭಾವಿ ವ್ಯಕ್ತಿಗಳ ಹೆಸರುಗಳು ಉಲ್ಲೇಖವಾಗಿವೆ ಎನ್ನಲಾಗಿದೆ. ರಾಜ್ಯದ ಇಬ್ಬರು ಪ್ರಭಾವಿ ಶಾಸಕರು ಹಾಗೂ ಒಬ್ಬ ಮಾಜಿ ಸಂಸದರಿಗೆ ಸಂಬಂಧಿಸಿದ ಉಲ್ಲೇಖಗಳು ಡೈರಿಯಲ್ಲಿ ಇರುವ ಬಗ್ಗೆ ತಿಳಿದುಬಂದಿದೆ. ವಿಶೇಷವಾಗಿ ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಯ ರಾಜಕೀಯ ನಾಯಕರೊಂದಿಗೆ ರಾಯ್ ಹೊಂದಿದ್ದ ವ್ಯವಹಾರಿಕ ಸಂಪರ್ಕಗಳ ಕುರಿತು ವಿವರಗಳಿರುವುದಾಗಿ ಮೂಲಗಳು ಹೇಳುತ್ತಿವೆ.
ಇದರ ಜೊತೆಗೆ, ದಕ್ಷಿಣ ಭಾರತದ ಚಿತ್ರರಂಗಕ್ಕೆ ಸಂಬಂಧಿಸಿದ ಕೆಲವು ಖ್ಯಾತ ನಟಿ ಮತ್ತು ಮಾಡೆಲ್ಗಳ ಹೆಸರುಗಳು ಡೈರಿಯಲ್ಲಿ ಕಾಣಿಸಿಕೊಂಡಿವೆ ಎಂಬ ಮಾಹಿತಿಯೂ ಹೊರಬಂದಿದೆ. ದುಬೈನಲ್ಲಿ ನಡೆಸುತ್ತಿದ್ದ ವ್ಯವಹಾರಗಳು, ಅಲ್ಲಿನ ಪ್ರಭಾವಿ ವ್ಯಕ್ತಿಗಳೊಂದಿಗೆ ಹೊಂದಿದ್ದ ಸಂಪರ್ಕಗಳ ಕುರಿತೂ ರಾಯ್ ತಮ್ಮ ದಿನಚರಿಯಲ್ಲಿ ದಾಖಲಿಸಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಈ ಎಲ್ಲಾ ಅಂಶಗಳು ತನಿಖೆಯ ಹಂತದಲ್ಲಿದ್ದು, ಪೊಲೀಸರು ಅಧಿಕೃತ ದೃಢೀಕರಣ ನೀಡಿಲ್ಲ.

ಈ ಪ್ರಕರಣದ ಹಿನ್ನೆಲೆಯಲ್ಲಿ ಬರಹಗಾರ ಚಂದ್ರಚೂಡ್ ಅವರು ವಿಡಿಯೋ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ. “ಸಿ.ಜೆ. ರಾಯ್ ಆತ್ಮಹತ್ಯೆಗೆ ಮುಂದಾಗುವಂತಹ ಪರಿಸ್ಥಿತಿ ಯಾಕೆ ಉಂಟಾಯಿತು? ಅವರು ದೇಶ ಬಿಟ್ಟು ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತೇ? ದೊಡ್ಡಬಳ್ಳಾಪುರದ ರೆಸಾರ್ಟ್ನಲ್ಲಿ ನಡೆದ ಕೆಲವು ಘಟನೆಗಳು ಮತ್ತು ಒಬ್ಬ ಖ್ಯಾತ ನಟಿಯ ಜೊತೆಗಿನ ಸಂಪರ್ಕಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಜೊತೆಗೆ ಕಂಪನಿಯಲ್ಲಿ ನಡೆದಿರಬಹುದಾದ ಆರ್ಥಿಕ ಅಕ್ರಮಗಳ ಕುರಿತು ತನಿಖೆ ಅಗತ್ಯ” ಎಂದು ಅವರು ಆಗ್ರಹಿಸಿದ್ದಾರೆ.
C.J. Roy, Chairman of the prominent real estate firm Confident Group, allegedly died by suicide after shooting himself at the company’s office in Langford Town on Hosur Road, Bengaluru. The incident reportedly occurred while Income Tax officials were questioning him, sending shockwaves through business and real estate circles.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm