ಬ್ರೇಕಿಂಗ್ ನ್ಯೂಸ್
14-02-26 07:37 pm HK Staffer ಕ್ರೈಂ
ಬೆಂಗಳೂರು, ಫೆ 14: ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟು ಸಾಲ ಪಡೆಯುವ ಗ್ರಾಹಕರು ಬೆಚ್ಚಿಬೀಳಿಸುವ ಘಟನೆ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಜನರ ನಂಬಿಕೆಗೆ ಪಾತ್ರರಾಗಬೇಕಿದ್ದ ಬ್ಯಾಂಕ್ ಅಧಿಕಾರಿಯೇ ಗ್ರಾಹಕರ ಕೋಟ್ಯಂತರ ಮೌಲ್ಯದ ಚಿನ್ನಕ್ಕೆ ಕನ್ನ ಹಾಕಿರುವ ಪ್ರಕರಣ ಗಿರಿನಗರದಲ್ಲಿ ದಾಖಲಾಗಿದೆ.
ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಕಿರಣ್ ಕುಮಾರ್ ಎಂಬಾತನನ್ನ ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬೆಟ್ಟಿಂಗ್ ಗೇಮ್ ಆಡುವ ಚಟಕ್ಕೆ ಬಿದ್ದಿದ್ದ ಕಿರಣ್ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಲ್ಲಿ ಗಿರವಿ ಇಟ್ಟಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಜೇಬಿಗಿಳಿಸಿಕೊಂಡಿದ್ದಾನೆ.
2.7 ಕೆಜಿ ಚಿನ್ನ ನಾಪತ್ತೆ ;
ಬ್ಯಾಂಕ್ ಲಾಕರ್‌ನಲ್ಲಿದ್ದ ಗ್ರಾಹಕರಿಗೆ ಸೇರಿದ 2 ಕೆಜಿ 787 ಗ್ರಾಂ ಚಿನ್ನಾಭರಣಗಳನ್ನು ಆರೋಪಿ ಕದ್ದಿದ್ದಾನೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 4 ಕೋಟಿ 12 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಲಾಕರ್ ಕೀ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಇಬ್ಬರ ಬಳಿಯೂ ಇರುತ್ತಿತ್ತು. ಮ್ಯಾನೇಜರ್ ಗೈರಾಗಿರುವ ಸಮಯವನ್ನು ಬಳಸಿಕೊಂಡ ಕಿರಣ್ ಯಾರಿಗೂ ಅನುಮಾನ ಬಾರದಂತೆ ಪ್ಯಾಕೇಟ್‌ಗಳಿಂದ ಸ್ವಲ್ಪ ಸ್ವಲ್ಪವಾಗಿ ಚಿನ್ನ ಕದಿಯುತ್ತಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ.
ಸಿಕ್ಕಿಬಿದ್ದಿದ್ದು ಹೇಗೆ?
ಫೆಬ್ರವರಿ 2ರಂದು ಗ್ರಾಹಕರೊಬ್ಬರು ತಮ್ಮ ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಬಂದಾಗ ಲಾಕರ್ ಪರಿಶೀಲನೆ ವೇಳೆ ಆಭರಣ ನಾಪತ್ತೆಯಾಗಿರುವುದು ಪತ್ತೆಯಾಯಿತು. ಮುಂದಿನ ಪರಿಶೀಲನೆ ವೇಳೆ 21 ಪ್ಯಾಕೇಟ್‌ಗಳಲ್ಲಿ ಭಾಗಶಃ ಹಾಗೂ 3 ಪ್ಯಾಕೇಟ್‌ಗಳಲ್ಲಿ ಸಂಪೂರ್ಣ ಚಿನ್ನ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಖಾಸಗಿ ಫೈನಾನ್ಸ್‌ಗೆ ಗಿರವಿ;
ತನಿಖೆ ವೇಳೆ ಆರೋಪಿ, ಕದ್ದ ಚಿನ್ನವನ್ನು ಮಣಪ್ಪುರಂ ಫೈನಾನ್ಸ್ ಹಾಗೂ ಹಾಗೂ ಮುತ್ತೂಟ್ ಫೈನಾನ್ಸ್ ನಲ್ಲಿ ಗಿರವಿ ಇಟ್ಟು ಹಣ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆ ಹಣವನ್ನು ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಕಳೆದುಕೊಂಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.
ಈಗಾಗಲೇ ಸುಮಾರು 700 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದ್ದು, ಉಳಿದ ಚಿನ್ನ ಪತ್ತೆ ಹಾಗೂ ಹಣದ ಹಾದಿ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
In a shocking breach of trust, an assistant manager of the Indian Bank’s Girinagar branch in Bengaluru has been arrested for allegedly stealing gold ornaments worth over ₹4 crore pledged by customers for loans.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm