ಬ್ರೇಕಿಂಗ್ ನ್ಯೂಸ್
01-01-21 05:39 pm Udupi Correspondent ಕ್ರೈಂ
ಉಡುಪಿ, ಜ.1: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ಸಾರ್ವಜನಿಕ ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಡಿ.31 ಮಧ್ಯರಾತ್ರಿ 12 ಗಂಟೆಯ ನಂತರ ಯಾರು ಕೂಡ ಸಾರ್ವಜನಿಕ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟಪ್ಪಣೆ ಮಾಡಿದ್ದರು. ಆದರೆ, ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಹೊಟೇಲುಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಉಡುಪಿ ನಗರದ ಕಾಯಿನ್ ಸರ್ಕಲ್ ಬಳಿ ರಸ್ತೆಯನ್ನು ಬ್ಲಾಕ್ ಮಾಡಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಜನರನ್ನು ಚದುರಿಸಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸಾರ್ವಜನಿಕವಾಗಿ ಪಾರ್ಟಿ ಮಾಡುವಂತಿಲ್ಲ ಎಂಬ ಆದೇಶ ಇದ್ದರೂ, ಬಾರ್, ಪಬ್ ನಲ್ಲಿ ಪಾರ್ಟಿ ಮಾಡುವುದಕ್ಕೇನು ಅಡ್ಡಿ ಇರಲಿಲ್ಲ. ಎಂದಿಗಿಂತ ಸ್ವಲ್ಪ ಹೆಚ್ಚೇ ಉಡುಪಿ ಮತ್ತು ಮಣಿಪಾಲದಲ್ಲಿ ಮಧ್ಯರಾತ್ರಿ ಜನರು ಮತ್ತು ವಾಹನಗಳು ಓಡಾಡಿದ್ದವು. ಇದೇ ವೇಳೆ ಒಂದಷ್ಟು ಯುವಕರು ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದಾರೆ. ಈಗಷ್ಟೇ ಸ್ವಾತಂತ್ರ್ಯ ಸಿಗ್ತು ಅನ್ನುವ ರೀತಿ ಕುಣಿದಾಡಿದ್ದು ಕೂಡಲೇ ಪೊಲೀಸರು ಲಾಠಿಗೆ ಕೆಲಸ ಕೊಟ್ಟಿದ್ದಾರೆ.
Video:
Police lati charge on Public and Youths who had heavily drunk and dancing on streets for New Year Party 2021 in Udupi.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm