ಬ್ರೇಕಿಂಗ್ ನ್ಯೂಸ್
20-02-26 03:03 pm HK News Desk ಕ್ರೈಂ
ಬಾಗಲಕೋಟೆ, ಫೆ 20: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಕಿಲ್ಲಾ ಓಣಿಯಲ್ಲಿ ದುಷ್ಕರ್ಮಿಗಳು ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ ಓರ್ವ ಸಾರ್ವಜನಿಕರಿಗೆ ಗಾಯವಾಗಿದೆ. ಕಲ್ಲು ತೂರಾಟದ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತಕ್ಷಣ ಜನರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಇದೀಗ ಘಟನೆ ಸಂಬಂಧ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ತನ್ವೀರ್ (28), ಮುಜ್ಜು (23), ಸದ್ದಾಂ (22), ಫಯಾಜ್ (24), ಸರ್ಫರಾಜ್ (33), ರಿಯಾನ್ (21), ಅಯಾನ್ (19) ಮತ್ತು ವಸೀಮ್ (22) ಎಂದು ಗುರುತಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿದ್ದಾರ್ಥ ಗೋಯಲ್, ವಿಡಿಯೋ ದೃಶ್ಯಗಳ ಆಧಾರದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಗುರುವಾರ ರಾತ್ರಿ 10:06ಕ್ಕೆ ಕಲ್ಲು ಎಸೆಯಲಾಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದರು.
ಡಿಜೆ ವಿಚಾರಕ್ಕೆ ಗಲಾಟೆ ನಡೆದಿಲ್ಲ. ಕಲ್ಲು ಮತ್ತು ಚಪ್ಪಲಿ ಎಸೆಯಲಾಗಿದೆ. ರಾತ್ರಿ 9:30ಕ್ಕೆ ಮಸೀದಿಯಲ್ಲಿ ಪ್ರಾರ್ಥನೆ ಮುಗಿದ ಬಳಿಕ ಕೆಲವರು ಅಲ್ಲೇ ಉಳಿದಿದ್ದರು. ಅವರಲ್ಲಿ ತನ್ವೀರ್ ಉದ್ದೇಶಪೂರ್ವಕವಾಗಿ ಕಲ್ಲು ಎಸೆದಿದ್ದಾನೆ ಎಂದು ಎಸ್‌ಪಿ ಮಾಹಿತಿ ನೀಡಿದರು.
ಕಲ್ಲು ನಮ್ಮ ಇಬ್ಬರು ಕಾನ್‌ಸ್ಟೇಬಲ್ ಹಾಗೂ ನನ್ನ ಮೇಲೆ ಬಿದ್ದಿತ್ತು. ಎಲ್ಲರೂ ಹೆಲ್ಮೆಟ್ ಧರಿಸಿದ್ದರಿಂದ ಗಂಭೀರ ಗಾಯವಾಗಿಲ್ಲ. ಮಸೀದಿಯಿಂದ ಕಲ್ಲು ಎಸೆದ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ ಎಂದರು. ಒಬ್ಬನೇ ವ್ಯಕ್ತಿ ಎರಡು ಕಲ್ಲು ಎಸೆದಿದ್ದಾನೆ. ಬಂಧಿತ 8 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಎರಡೂ ಗುಂಪಿನ ಹಿರಿಯರು ಸಹಕಾರ ನೀಡಿದ್ದಾರೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲು ಮತ್ತು ಒಂದು ಚಪ್ಪಲಿ ತೂರಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಅಥವಾ ಶಿವಾಜಿ ಭಾವಚಿತ್ರಕ್ಕೆ ಹಾನಿಯಾಗಿಲ್ಲ, ಕಲ್ಲು ಪೊಲೀಸರ ಮೇಲೆ ಬಿದ್ದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಘಟನೆಗೆ ಕೋಮು ಕಾರಣಗಳಿಲ್ಲವೆಂದು ತಿಳಿಸಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದ್ದಾರೆ.
ಕಲ್ಲು ತೂರಾಟದಲ್ಲಿ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ತಲೆಗೆ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇಗುಲ ಬಳಿ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.
ಘಟನೆಯ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ. ವ್ಯಾಪಾರಿ ಜನ್ನತಬಿ ದೊಡ್ಡಮನಿ ತಮ್ಮ ತಳ್ಳುಗಾಡಿ ಹಾಗೂ ಚಿಲ್ಲರೆ ಹಣ, ತಕ್ಕಡಿ ಎಲ್ಲ ಸುಟ್ಟಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಲ್ಲು, ಚಪ್ಪಲಿ ತೂರಾಟ ಹಿನ್ನೆಲೆ ಫೆಬ್ರವರಿ 24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ ಹಾಗೂ ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್ ಆದೇಶ ಹೊರಡಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ 4 ಕ್ಕಿಂತ ಹೆಚ್ಚು ಜನ ಸೇರಲು ನಿರ್ಬಂಧ ಹೇರಲಾಗಿದೆ. ಅಪಾಯಕಾರಿ ಶಸ್ತ್ರಾಸ್ತ್ರ ಹಿಡಿದು ಸಂಚರಿಸುವುದು, ಅನುಮತಿ ಇಲ್ಲದೆ ಸಭೆ–ಧರಣಿ ನಡೆಸುವುದು ನಿಷೇಧಿಸಲಾಗಿದೆ. ಘಟನೆಗೆ ಸಂಬಂಧಿಸಿದ ವೀಡಿಯೊಗಳನ್ನು ಪರಿಶೀಲಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪುಂಡರಿಗೆ ಚಳಿ ಬಿಡಿಸುವಂತೆ ಪೊಲೀಸರಿಗೆ ಸಿಎಂ ಸೂಚನೆ ;
ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕವಾಗಿದ್ದು ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
'ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ' ಎಂದು ಹೇಳಿದ್ದಾರೆ.
'ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ' ಎಂದು ಹೇಳಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm