ಬ್ರೇಕಿಂಗ್ ನ್ಯೂಸ್
20-02-26 08:54 pm mangalore ಕ್ರೈಂ
ಶಿವಮೊಗ್ಗ, ಫೆ.20 ಗಂಡ ಸತ್ತ ಒಂದೇ ವಾರಕ್ಕೆ ಆತನ ಪತ್ನಿಯ ಹಿಂದೆ ಬಿದ್ದ ಕಾನ್ಸ್ ಟೇಬಲ್ ಒಬ್ಬಾತ ಮೆಸೇಜ್ ಮಾಡಿ ಪೀಡಿಸಿದ್ದಾನೆ. ಪೊಲೀಸ್ ಪೇದೆಯ ಕಿರುಕುಳ ತಾಳಲಾರದೇ ಮಹಿಳೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಸಿದ್ದಾಪುರದಲ್ಲಿ ನಡೆದಿದೆ.
ಫೆಬ್ರವರಿ 14ರಂದು ಕೆಎಸ್ ಐ ಎಸ್ ಎಫ್ ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಗದೀಶ್ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದರು. ಇದೇ ವೇಳೆ, ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ತೀರ್ಥಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮೋಹನ್, ಜಗದೀಶ್ ಅವರ ಪತ್ನಿ ಸ್ವಾತಿಗೆ ಮೆಸೇಜ್ ಮಾಡುತ್ತಿದ್ದರು. ಇದರಿಂದ ಕಿರಿಕಿರಿಗೊಂಡ ಸ್ವಾತಿ, ಪೊಲೀಸ್ ಪೇದೆಯ ಫೇಸ್ಬುಕ್ ಖಾತೆಯನ್ನು ಬ್ಲಾಕ್ ಮಾಡಿದ್ದರು.
ಇದರ ಬಳಿಕ ಸ್ವಾತಿಗೆ ಮತ್ತೊಂದು ಖಾತೆಯಿಂದ ಪೇದೆ ಮೋಹನ್ ಮೆಸೇಜ್ ಮಾಡತೊಡಗಿದ್ದರು. ಇದರಿಂದ ಬೇಸತ್ತ ಸ್ವಾತಿ, ಭದ್ರಾವತಿಯ ಹೊಸ ಸಿದ್ದಾಪುರದ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕು ಮುನ್ನ ಸ್ವಾತಿ ತನ್ನ ತಾಯಿಗೆ ವಾಟ್ಸ್ ಆಪ್ ಮೂಲಕ ಮೆಸೇಜ್ ಮಾಡಿದ್ದು, ತೀರ್ಥಹಳ್ಳಿಯ ಪೊಲೀಸ್ ಪೇದೆ ಮೋಹನ್ ಹೆಸರು ಉಲ್ಲೇಖಿಸಿದ್ದಾರೆ. ಫೇಸ್ ಬುಕ್ ನಲ್ಲಿ ಮೋಹನ್ ಎಂಬ ಪೊಲೀಸ್ ನನಗೆ ಮೆಸೇಜ್ ಮಾಡಿದ್ದರು. ಅದಕ್ಕೆ ನಾನು ಅವರನ್ನು ಬ್ಲಾಕ್ ಮಾಡಿದ್ದೆ. ಆತ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ ಎಂಬುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.
ಮೃತ ಜಗದೀಶ್ ಹಾಗೂ ಸ್ವಾತಿ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದೀಗ ತಂದೆ- ತಾಯಿ ಇಬ್ಬರನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಮೃತ ಸ್ವಾತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭದ್ರಾವತಿ ತಾಲ್ಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident reported from Siddapur in Bhadravati town of Shivamogga district, a woman allegedly died by suicide following harassment by a police constable, just a week after her husband’s death.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm