ಬ್ರೇಕಿಂಗ್ ನ್ಯೂಸ್
22-02-26 09:32 pm HK News Desk ಕ್ರೈಂ
ನವದೆಹಲಿ, ಫೆ.22: ರಾಜಸ್ಥಾನದ ಜೋಧಪುರ ಜಿಲ್ಲೆಯ ಮನಾಯಿ ಗ್ರಾಮದಲ್ಲಿ ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ವಧುಗಳಿಬ್ಬರು ವಿಷ ಸೇವನೆಗೊಳಗಾಗಿ ನಿಗೂಢ ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಶನಿವಾರ ವಿವಾಹವಾಗಬೇಕಿದ್ದ ಸೋದರಿಯರಾದ ಶೋಭಾ (25) ಮತ್ತು ವಿಮ್ಲಾ (23) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ.
ಫೆಬ್ರವರಿ 21ರಂದು ಇಬ್ಬರು ಸಹೋದರಿಯರ ಮದುವೆ ಒಂದೇ ದಿನ ನಿಗದಿಯಾಗಿತ್ತು. ಫೆಬ್ರವರಿ 20ರ ರಾತ್ರಿ ವಿವಾಹ ಪೂರ್ವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದಿದ್ದವು. ಕುಟುಂಬಸ್ಥರು, ಬಂಧು ಬಳಗದವರ ಸಮ್ಮುಖದಲ್ಲಿ ಮನೆ ಸಂಭ್ರಮದ ವಾತಾವರಣದಲ್ಲಿತ್ತು. ಸಂಭ್ರಮ ಮುಗಿಸಿದ ಸಹೋದರಿಯರು ಮಧ್ಯರಾತ್ರಿ ಸುಮಾರಿಗೆ ತಮ್ಮ ಕೊಠಡಿಗೆ ವಿಶ್ರಾಂತಿಗೆ ತೆರಳಿದ್ದಾರೆ.
ಆದರೆ ಬೆಳಗಿನ ಜಾವ 4 ಗಂಟೆ ವೇಳೆಗೆ ಸಹೋದರಿಯರ ಆರೋಗ್ಯದಲ್ಲಿ ಆಕಸ್ಮಿಕವಾಗಿ ವೈಪರೀತ್ಯದ ಲಕ್ಷಣಗಳು ಗೋಚರಿಸಿವೆ. ತಕ್ಷಣವೇ ಕುಟುಂಬದವರು ಅವರನ್ನು ಜೋಧಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಇಬ್ಬರು ಸಹೋದರಿಯರು ವಿಷ ಪದಾರ್ಥ ಸೇವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಆದರೆ ನಿಖರವಾದ ಸಾವಿನ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ದೃಢಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮೊದಲಿಗೆ ಪೊಲೀಸರಿಗೆ ತಿಳಿಸಿರಲಿಲ್ಲ. ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದ್ದ ವೇಳೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂತ್ಯಕ್ರಿಯೆ ನಿಲ್ಲಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಕುಟುಂಬಕ್ಕೆ ಹಸ್ತಾಂತರಿಸಿದರು. ಘಟನೆಗೆ ಸಂಬಂಧಿಸಿದಂತೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಕಾರಣವಾದ ಅಂಶಗಳ ಕುರಿತು ಕುಟುಂಬ ಸದಸ್ಯರು ಹಾಗೂ ಸ್ಥಳೀಯರನ್ನು ವಿಚಾರಣೆ ನಡೆಸಲಾಗುತ್ತಿದೆ. ಮದುವೆ ಸಂಭ್ರಮಕ್ಕೆ ಸಜ್ಜಾಗಿದ್ದ ಮನೆ ಒಂದೇ ಕ್ಷಣದಲ್ಲಿ ಶೋಕದಲ್ಲಿ ಮುಳುಗಿರುವ ಘಟನೆ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm