ಬ್ರೇಕಿಂಗ್ ನ್ಯೂಸ್
22-02-26 10:43 pm Mangalore Correspondent ಕ್ರೈಂ
ಮಂಗಳೂರು, ಫೆ.22: ಅಕ್ರಮವಾಗಿ ಜಾನುವಾರುಗಳನ್ನು ಕೈಕಾಲು ಕಟ್ಟಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕದ್ರಿ ಠಾಣೆ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಲಾರಿಯನ್ನು ಅಡ್ಡಗಟ್ಟಿ 34 ಗೋವುಗಳನ್ನು ರಕ್ಷಿಸಿದ್ದಾರೆ.
ಕದ್ರಿ ಪೊಲೀಸರು ಭಾನುವಾರ ಮುಂಜಾನೆ ಕಾರ್ಯಾಚರಣೆ ನಡೆಸಿದ್ದು ನಂತೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿ ನಿಲ್ಲಿಸಿ ಶೋಧ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಲಾರಿಯನ್ನು ತಡೆದು ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಜಾನುವಾರು ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿತ್ತು.
ಶೋಧ ಸಂದರ್ಭದಲ್ಲಿ, ಜಾನುವಾರುಗಳ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಲಾರಿಯಲ್ಲಿ ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಲಾರಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ, ಲಾರಿಯಲ್ಲಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೈಸೂರು ಮೂಲದ ದಸ್ತಗೀರ್ ಸಾಬ್ (45), ಖತೀಬ್ ಪಾಷಾ, ಅಯೂಬ್ ಖಾನ್ ಬಂಧಿತರು.
ಗೋವುಗಳನ್ನು ಶಿವಮೊಗ್ಗದಿಂದ ಮೂಡುಬಿದ್ರೆ - ಮಂಗಳೂರು ಮೂಲಕ ಕೇರಳದ ಹೊಸಂಗಡಿಗೆ ಸಾಗಾಟ ಮಾಡುತ್ತಿದ್ದರು. ಹೊಸಂಗಡಿಯಲ್ಲಿ ಮಾಂಸಗೈದು ಪೂರೈಕೆ ಮಾಡಲು ಯೋಜನೆ ಹಾಕಿದ್ದರು. ಆದರೆ ಮಂಗಳೂರು ಪೊಲೀಸರು ಲಾರಿಯನ್ನು ಅಡ್ಡಗಟ್ಟಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಕರ್ನಾಟಕ ಗೋ ಹತ್ಯೆ ತಡೆ ಮತ್ತು ಗೋ ಸಂರಕ್ಷಣಾ ಕಾಯ್ದೆ ಮತ್ತು ಕಲಂ 11 ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm