ಬ್ರೇಕಿಂಗ್ ನ್ಯೂಸ್
23-02-26 07:35 pm HK News Desk ಕ್ರೈಂ
ತುಮಕೂರು, ಫೆ.23 : ಗೃಹ ಸಚಿವರ ತವರು ಜಿಲ್ಲೆಯಾದ ತುಮಕೂರಿನಲ್ಲಿ ದರೋಡೆಕೋರರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಘಟನೆ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಬೆಂಚ್ ಗೇಟ್ ಬಳಿ ಇರುವ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಖತರ್ನಾಕ್ ಗ್ಯಾಂಗ್ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿತ್ತು. ಆದರೆ ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ಮೂಲದ ಅರವಿಂದ್, ದುಂಗರ್ ಸಿಂಗ್, ಮಹೇಂದ್ರ ಸಿಂಗ್ ಮತ್ತು ಮಧು ಸಿಂಗ್ ಬಂಧಿತ ಆರೋಪಿಗಳು. ಕಳೆದ 3 ರಿಂದ 4 ದಿನಗಳಿಂದ ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದ ಈ ಗ್ಯಾಂಗ್, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜ್ಯುವೆಲರಿ ಅಂಗಡಿಗಳನ್ನು ಟಾರ್ಗೆಟ್ ಮಾಡಿಕೊಂಡಿತ್ತು. ಮೊದಲೇ ಯೋಜನೆಯಂತೆ ಬೊಲೆರೋ ಕಾರಿನಲ್ಲಿ ಬಂದ ಆರೋಪಿಗಳು ಹಾಡಹಗಲೇ ಅಂಗಡಿಗೆ ನುಗ್ಗಿ ಖಾರದ ಪುಡಿ ಎರಚಿ, ಬಳಿಕ ಶಟರ್ ಮುಚ್ಚಿ ದರೋಡೆ ನಡೆಸಿದ್ದಾರೆ. ಅಂಗಡಿಯಲ್ಲಿ ಇದ್ದ 100 ಗ್ರಾಂ ಚಿನ್ನ ಹಾಗೂ ಸುಮಾರು 1.5 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 26 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ದಿನೇಶ್ ಮತ್ತು ಅವರ ಅಜ್ಜಿ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.


ಘಟನೆ ಕುರಿತು ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಲೆರೋ ವಾಹನದ ಮಾಹಿತಿ ಆಧರಿಸಿ ಶಿರಾ ಡಿವೈಎಸ್ಪಿ ಶೇಖರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮೊದಲಿಗೆ ಟೋಲ್ ಗೇಟ್ ಬಳಿ ಕಾರು ಪತ್ತೆಯಾದ ಬಳಿಕ ಆರೋಪಿಗಳ ವಾಹನವನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಅಂತಿಮವಾಗಿ ಹುಯಿಲು ದೊರೆ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕದ್ದೊಯ್ದಿದ್ದ ಸಂಪೂರ್ಣ ಚಿನ್ನಾಭರಣವನ್ನು ವಶಪಡಿಸಲಾಗಿದೆ. ಪ್ರಕರಣವನ್ನು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm