ಬ್ರೇಕಿಂಗ್ ನ್ಯೂಸ್
23-02-26 10:44 pm HK News Desk ಕ್ರೈಂ
ನವದೆಹಲಿ, ಫೆ.23: ಐಡಿಎಫ್ಸಿ ಫಸ್ಟ್ ಬ್ಯಾಂಕಿನ ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ. ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು ಇದರ ಬೆನ್ನಲ್ಲೇ ಬ್ಯಾಂಕಿನ ಷೇರು ಪಾತಾಳಕ್ಕೆ ಕುಸಿಯತೊಡಗಿದೆ. ಸೋಮವಾರ ಒಂದೇ ದಿನ ಷೇರುಬೆಲೆ ಶೇ. 20ರಷ್ಟು ಕುಸಿದಿದ್ದು ಹೂಡಿಕೆದಾರರಿಗೆ 14,000 ಕೋಟಿ ರೂ. ಅಧಿಕ ನಷ್ಟ ಉಂಟಾಗಿದೆ.
ಐಡಿಎಫ್ಸಿ ಫಸ್ಟ್ ಬ್ಯಾಂಕ್ನ ಚಂಡೀಗಡ ಶಾಖೆಯಲ್ಲಿ ಠೇವಣಿ ಹಣ ವಂಚನೆಯಾಗಿರುವ ಆರೋಪ ಭಾನುವಾರ ಬೆಳಕಿಗೆ ಬಂದಿತ್ತು. ಹರ್ಯಾಣ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಸಂಸ್ಥೆಗಳ ಠೇವಣಿ ಖಾತೆಗಳಲ್ಲಿ ಅನಧಿಕೃತ ವಹಿವಾಟುಗಳು ನಡೆದಿರುವುದು ಬೆಳಕಿಗೆ ಬಂದಿದೆ. ಸರ್ಕಾರವು ಈ ಅಕೌಂಟ್ಗಳನ್ನು ಮುಚ್ಚಲು ಹೋದಾಗ ಅಕೌಂಟ್ ಬ್ಯಾಲೆನ್ಸ್ನಲ್ಲಿ ಭಾರೀ ವ್ಯತ್ಯಾಸ ಪತ್ತೆಯಾಗಿತ್ತು. ಒಟ್ಟು 590 ಕೋಟಿಯಷ್ಟು ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಇಡೀ ಬ್ಯಾಂಕಿನ ಈ ಸಲದ ತ್ರೈಮಾಸಿಕ ಅವಧಿಯ ನಿವ್ವಳ ಲಾಭವೇ 503 ಕೋಟಿಯಾಗಿದ್ದರೆ, ಅದಕ್ಕಿಂತಲೂ ಹೆಚ್ಚಿನ ಮೊತ್ತದ ಅಕ್ರಮ ಆಗಿದೆಯೆಂಬ ಮಾಹಿತಿ ಬ್ಯಾಂಕಿನ ಷೇರು ದಿಢೀರ್ ಕುಸಿಯಲು ಕಾರಣವಾಗಿದೆ.
ಸಿಬಂದಿಯೇ ವಂಚಿಸಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಐವರನ್ನು ಸದ್ಯಕ್ಕೆ ಸಮಾನತು ಮಾಡಲಾಗಿದೆ. ಅಲ್ಲದೆ, ಹರ್ಯಾಣ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪ ಆಗಿದ್ದರಿಂದ ಸಮಗ್ರ ತನಿಖೆಗೆ ರಾಜ್ಯ ಸರ್ಕಾರ ಆದೇಶ ಮಾಡಿದೆ. ಅಕ್ರಮವಾಗಿ ನಡೆದಿರುವ ವಹಿವಾಟುಗಳನ್ನು ಟ್ರ್ಯಾಕ್ ಮಾಡಲಾಗುತ್ತಿದ್ದು ಶಾಖೆಯಿಂದ ವರ್ಗಾವಣೆ ಆಗಿರುವ ಹಣವನ್ನು ಫ್ರೀಜ್ ಮಾಡುವಂತೆ ಸಂಬಂಧಿಸಿದ ಬ್ಯಾಂಕುಗಳಿಗೆ ಮನವಿ ಮಾಡಲಾಗಿದೆ. ಹರ್ಯಾಣ ಸರ್ಕಾರವು ತನ್ನ ಠೇವಣಿ ಡಿಪಾಸಿಟ್ ಪಟ್ಟಿಯಿಂದ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಅನ್ನು ತೆರವುಗೊಳಿಸಿದೆ. ಸರ್ಕಾರದ ಅಧೀನದ ಇಲಾಖೆಗಳು ಈ ಬ್ಯಾಂಕ್ನಲ್ಲಿ ಹೊಂದಿರುವ ಅಕೌಂಟ್ಗಳನ್ನು ಮುಚ್ಚುವಂತೆಯೂ ಸರ್ಕಾರ ಸೂಚಿಸಿದೆ.
ಅಕ್ರಮದ ಬಗ್ಗೆ ಬ್ಯಾಂಕ್ ಆಂತರಿಕ ತನಿಖೆ ನಡೆಸಿದ್ದು, ಐವರು ಬ್ಯಾಂಕ್ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟಿದೆ. ಪೊಲೀಸರಿಗೆ ದೂರು ನೀಡಿದ್ದು ಸರ್ಕಾರಿ ಆಡಿಟಿಂಗ್ಗೆ ಸೂಚಿಸಲಾಗಿದೆ. ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವಂತೆ ತಿಳಿಸಲಾಗಿದೆ ಎಂದು ಬ್ಯಾಂಕ್ ಹೇಳಿಕೊಂಡಿದೆ. ಆದರೆ ಷೇರು ಮಾರುಕಟ್ಟೆಯಲ್ಲಿ ಬ್ಯಾಂಕ್ ಭಾರೀ ಕುಸಿತ ದಾಖಲಿಸಿದ್ದು ಹೂಡಿಕೆದಾರರು ಇದರ ಷೇರನ್ನು ಮಾರಲು ತೊಡಗಿದ್ದಾರೆ. ಇದರಿಂದಾಗಿ ಬ್ಯಾಂಕ್ ಪಾಲಿಗೆ ಮತ್ತಷ್ಟು ನಷ್ಟ ಆಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm