ಬ್ರೇಕಿಂಗ್ ನ್ಯೂಸ್
26-02-26 04:45 pm HK News Staffer ಕ್ರೈಂ
ಬೆಂಗಳೂರು, ಫೆ.26: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿಗಳು ಬಹಿರಂಗವಾಗಿವೆ. ರಾಯ್ ಆತ್ಮಹತ್ಯೆಗೆ ಸುಮಾರು ₹500 ಕೋಟಿ ಹವಾಲಾ ಹಣ ವ್ಯವಹಾರ ಪ್ರಮುಖ ಕಾರಣವಾಗಿರಬಹುದು ಎಂದು ತನಿಖಾ ಮೂಲಗಳು ತಿಳಿಸಿವೆ. ಈ ಹಣದ ಲೆಕ್ಕಪತ್ರ ಒದಗಿಸಲು ರಾಯ್ ವಿಫಲವಾದ ಕಾರಣ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ಸಿಜೆ ರಾಯ್ ಅವರ ವ್ಯವಹಾರದಲ್ಲಿ ಸುಮಾರು ₹500 ಕೋಟಿ ಹಣದ ಅಸಮತೋಲನ ಕಂಡುಬಂದಿತ್ತು. ಕೇರಳದ ಕೊಚ್ಚಿ ಯೋಜನೆಗಳಿಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಬಳಿಕ ಆದಾಯ ತೆರಿಗೆ ಇಲಾಖೆ ತನಿಖೆ ಆರಂಭಿಸಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯು ಲೆಕ್ಕಪತ್ರ ವಿವರಗಳನ್ನು ಕೇಳಿತ್ತು.
ಈ ಹಣದ ಮೂಲ ವಿವರ ನೀಡಲು ಸಾಧ್ಯವಾಗದ ಕಾರಣ ರಾಯ್ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಹೇಳಲಾಗುತ್ತಿದೆ. ದುಬೈನಲ್ಲಿ ಇದ್ದ ರಾಯ್ ತನಿಖೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರೂ, ನಂತರ ಭಾರತಕ್ಕೆ ಮರಳಬೇಕಾಯಿತು. ಭಾರತಕ್ಕೆ ಬಂದ ಬಳಿಕ ಐಟಿ ಅಧಿಕಾರಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಾಯಿತು. ಸಿಜೆ ರಾಯ್ ತಮ್ಮ ಪಾರ್ಟ್ನರ್ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಸಲಹೆಯಂತೆ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂತೆಗೆದುಕೊಂಡಿದ್ದರು. ನಂತರವೂ ಹಣದ ಮೂಲದ ಬಗ್ಗೆ ಸ್ಪಷ್ಟ ಉತ್ತರ ನೀಡಲು ಸಾಧ್ಯವಾಗದೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ.
ಆತ್ಮಹತ್ಯೆ ದಿನ ರಾಯ್ ಅವರು ಐಟಿ ಅಧಿಕಾರಿಗಳಿಗೆ ಸಹಕರಿಸುವುದಾಗಿ ಹೇಳಿದ್ದರು. ಆದರೆ ಆ ದಿನ ಮಾನಸಿಕ ಖಿನ್ನತೆಗಾಗಿ ಬಳಸುತ್ತಿದ್ದ ಔಷಧಿಗಳನ್ನು ಸೇವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಅವರ ಖಿನ್ನತೆ ಹೆಚ್ಚಾಗಿ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಮಾಹಿತಿಗಳ ಪ್ರಕಾರ, ಸಿಜೆ ರಾಯ್ ಮೊದಲು ತಮ್ಮ ಕಚೇರಿಗೆ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರಂತೆ. ಆದರೆ ಸಾರ್ವಜನಿಕ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಸೂಕ್ತವಲ್ಲ ಎಂದು ಭಾವಿಸಿ ನಂತರ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ರಾಯ್ ಅವರು ತಮ್ಮ ಕಚೇರಿ ಕ್ಯಾಬಿನ್‌ನಲ್ಲಿ ಎದೆಗೆ ಪಾಯಿಂಟ್ ಬ್ಲ್ಯಾಂಕ್ ಅಂತರದಿಂದ ಗುಂಡು ಹಾರಿಸಿಕೊಂಡಿದ್ದರು. ಗುಂಡು ಹೃದಯವನ್ನು ಸೀಳಿ ನಂತರ ಪಂಜರ ಎಲುಬುಗಳಲ್ಲಿ ಸಿಲುಕಿಕೊಂಡಿದ್ದರಿಂದ ಹೆಚ್ಚಿನ ರಕ್ತಸ್ರಾವವಾಗಲಿಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಈ ಹಣ ಯಾರಿಗೆ ಸೇರಿತ್ತು ಮತ್ತು ಯಾವ ಉದ್ದೇಶಕ್ಕಾಗಿ ವರ್ಗಾವಣೆಗೊಂಡಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಮತ್ತು ತನಿಖಾ ಸಂಸ್ಥೆಗಳು ಪ್ರಕರಣದ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರೆಸಿವೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm