ಬ್ರೇಕಿಂಗ್ ನ್ಯೂಸ್
06-04-26 02:34 pm HK News Staffer ಕ್ರೈಂ
ಬೆಳಗಾವಿ, ಏ 06: ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ(36) ಮೃತ ದಂಪತಿಗಳು. ಮಧುರಾ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಮಧುರಾ ಕೊನೆಯುಸಿರೆಳೆದಿದ್ದಾರೆ.
ಇತ್ತ ಪತ್ನಿ ಆಸ್ಪತ್ರೆ ಸೇರಿದ ಸುದ್ದಿ ಕೇಳಿ ಬೆಳಗಾವಿಗೆ ತರಾತುರಿಯಲ್ಲಿ ಬರುತ್ತಿದ್ದ ಪತಿ ಕರೆಪ್ಪ ಅರವಳ್ಳಿ ಕ್ರಾಸ್ ಬಳಿ ರಸ್ತೆ ದಾಟುವಾಗ ಧಾರವಾಡದಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಒಂದೇ ದಿನ ಪತಿ, ಪತ್ನಿ ಮೃತಪಟ್ಟಿರುವುದರಿಂದ ಅರವಳ್ಳಿ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಧುರಾ ಮತ್ತು ಕರೆಪ್ಪ ದಂಪತಿ ಮದುವೆ ಆಗಿ 9 ವರ್ಷ ಆಗಿತ್ತು. ಇವರಿಗೆ ಒಂದು ಹೆಣ್ಣು, ಎರಡು ಗಂಡು ಮಕ್ಕಳಿದ್ದಾರೆ. ಈಗ ಒಂದೇ ದಿನ ತಂದೆ-ತಾಯಿಯನ್ನು ಕಳೆದುಕೊಂಡು ಮೂವರು ಮಕ್ಕಳು ಅನಾಥರಾಗಿದ್ದಾರೆ. ದೇವರು ಈ ಕುಟುಂಬಕ್ಕೆ ಅನ್ಯಾಯ ಮಾಡಿದ ಅಂತಾ ಗ್ರಾಮಸ್ಥರು ಮಮ್ಮಲ ಮರಗುತ್ತಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm