ಬ್ರೇಕಿಂಗ್ ನ್ಯೂಸ್
08-04-26 05:53 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಇದೇ ಮೊದಲ ಬಾರಿಗೆ ಮಂಗಳೂರು ಪೊಲೀಸರು ಐದು ಜನ ವಿದ್ಯಾರ್ಥಿಗಳನ್ನು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡಿದ್ದು, ಅಲ್ಲಿಗೆ ಬರುತ್ತಿದ್ದ ಇತರರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕಮಿಷನರ್ ಸುಧೀರ್ ರೆಡ್ಡಿ, ವಿದ್ಯಾರ್ಥಿಯೊಬ್ಬನ ತಾಯಿ ತನ್ನ ಮಗನ ಕೈಯಲ್ಲಿ ಗಾಂಜಾ ಪ್ಯಾಕೆಟ್ ಸಿಕ್ಕಿರುವ ಬಗ್ಗೆ ನೀಡಿರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ, ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡು ಡ್ರಗ್ಸ್ ಪೂರೈಕೆ ವಹಿವಾಟು ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಬಂಧನ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.
ತನಿಖೆಯ ವೇಳೆ ಐದು ಜನ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ರೂಮ್ ಮಾಡಿಕೊಂಡು ಅಲ್ಲಿಯೇ ಡ್ರಗ್ಸ್ ತಂದು ಪ್ಯಾಕಿಂಗ್ ಮಾಡುವುದು, ಬೇರೆಯವರಿಗೆ ಪೂರೈಕೆ ಮಾಡುತ್ತಿರುವುದು ಗೊತ್ತಾಗಿದೆ. ಇವರು ಮಂಗಳೂರಿನ ಆರು ಕಾಲೇಜಿನ 40 ಜನ ವಿದ್ಯಾರ್ಥಿಗಳು, ಹತ್ತು ಜನ ಹೊರಗಿನವರಿಗೆ ಪೂರೈಕೆ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರಿಗೆ ಕೌನ್ಸೆಲಿಂಗ್ ಮಾಡಲಾಗುವುದು.
ಎಲ್ಲ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ಇಟ್ಟುಕೊಳ್ಳಬೇಕು. ಅವರ ನಡತೆಯಲ್ಲಿ ಬದಲಾವಣೆ ಕಂಡುಬಂದರೆ, ಏನಾದರೂ ಸಮಸ್ಯೆ ಇದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಬೇಕು. ಯಾವುದೇ ಮಾಹಿತಿ, ಅನುಮಾನಗಳಿದ್ದಲ್ಲಿ ಸ್ಥಳೀಯ ಠಾಣೆಗೆ ತಿಳಿಸಬೇಕು. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ಹೊರಗಡೆ ರೂಮ್ ಮಾಡಿಕೊಳ್ಳುವುದನ್ನು ಮಾಡಿದರೆ ಯಾಕೆಂದು ಚೆಕ್ ಮಾಡಬೇಕು. ಆಮೂಲಕ ಇಂತಹ ಚಟುವಟಿಕೆಯನ್ನು ಮೂಲದಲ್ಲೇ ಹತ್ತಿಕ್ಕಲು ಸಾಧ್ಯವಾಗುತ್ತದೆ ಎಂದು ಕಮಿಷನರ್ ಪೋಷಕರಿಗೂ ಕಿವಿಮಾತು ಹೇಳಿದ್ದಾರೆ.
ಈಗ ಬಂಧಿತರಾದ ಐವರು ವಿದ್ಯಾರ್ಥಿಗಳು ಮೇಜರ್ ಆಗಿದ್ದು ಪಿಯುಸಿ ಕಲಿಯುವವರಲ್ಲ. ಅವರನ್ನು ಸದ್ಯಕ್ಕೆ ಬಂಧಿಸಲಾಗಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ಮಾಹಿತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm