ಬ್ರೇಕಿಂಗ್ ನ್ಯೂಸ್
11-04-26 11:14 pm HK News Desk ಕ್ರೈಂ
ಉಡುಪಿ, ಎಪ್ರಿಲ್ 11: ನೆಲ್ಯಾಡಿ ನಿವಾಸಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದಾರೆ.
ಸುದೀಪ್ ರೈ ಅವರು ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಮೊದಲಿಗೆ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ಕು ದಿನಗಳ ಬಳಿಕ ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಷ್ಟರಲ್ಲಿ ಸ್ಥಿತಿ ಉಲ್ಬಣಗೊಂಡಿದ್ದು ಮಾರ್ಚ್ 29ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ತನಿಖೆಯ ವೇಳೆ, ಸುದೀಪ್ ರೈ ಅವರು ಫೆಬ್ರವರಿ 17ರಂದು ಪುತ್ತೂರು ಉಪ ನೋಂದಣಿ ಕಚೇರಿಯಲ್ಲಿ ಮನೆ ಮಂದಿಗೆ ತಿಳಿಸದೆ ಸೌಮ್ಯ ಶೆಟ್ಟಿ ಜೊತೆಗೆ ವಿವಾಹ ನೋಂದಣಿ ಮಾಡಿದ್ದರು ಎಂಬುದು ತಿಳಿದುಬಂದಿತ್ತು. ಆಬಳಿಕ ಕಾರ್ಕಳದಲ್ಲಿ ಜೊತೆಗಿದ್ದಾಗಲೇ ವಿಷ ಸೇವನೆಯಾಗಿತ್ತು.
ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಸುದೀಪ್ ಅವರ ತಂದೆ ದಾಮೋದರ ರೈ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆಯ ಕಿರುಕುಳದಿಂದಲೇ ಮಗನ ಸಾವಾಗಿದೆ ಎಂದು ಆರೋಪಿಸಿದ್ದರು. ಆತ್ಮಹತ್ಯೆ ಪ್ರಚೋದನೆ ಶಂಕೆಯ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದರು. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಪ್ರಾಥಮಿಕ ಸಾಕ್ಷ್ಯಗಳ ಆಧಾರದ ಮೇಲೆ ಸೌಮ್ಯ ಶೆಟ್ಟಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಹರಿರಾಮ್ ತಿಳಿಸಿದ್ದಾರೆ. ಸುದೀಪ್ ಸಾವಿನ ಬಳಿಕ ಸೌಮ್ಯ ಶೆಟ್ಟಿ ವಿರುದ್ದ ಹಲವು ಆರೋಪಗಳು ಕೇಳಿಬಂದಿದ್ದವು. ಸುದೀಪ್ ತಂದೆ ಮತ್ತು ಸೌಮ್ಯಾ ಮಾಜಿ ಪ್ರಿಯಕರ ವೇಣು ಆಕೆಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm