ಬ್ರೇಕಿಂಗ್ ನ್ಯೂಸ್
14-04-26 11:16 pm HK News Desk ಕ್ರೈಂ
ಬೆಂಗಳೂರು, ಎಪ್ರಿಲ್ 14: ತಾಯಿಯೊಬ್ಬಳು ತನ್ನ ಮಗಳನ್ನು ಉಸಿರುಗಟ್ಟಿಸಿ ಸಾಯಿಸಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಸಮೀಪದ ಇಮ್ಮಡಿಹಳ್ಳಿಯಲ್ಲಿ ನಡೆದಿದೆ.
ಇಮ್ಮಡಿಹಳ್ಳಿಯ ನಿವಾಸಿ ಸುವರ್ಣ (40) ಹಾಗೂ ಅವರ ಪುತ್ರಿ ಕಾರುಣ್ಯ (14) ಮೃತಪಟ್ಟ ದುರ್ದೈವಿಗಳು. ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ವೇಳೆ ಸುವರ್ಣ ಅವರ ಅತ್ತೆ ಮತ್ತು ಮಾವ ಮನೆಯಲ್ಲೇ ಇದ್ದರು. ಮಗಳನ್ನು ಕೊಠಡಿಯೊಳಗೆ ಕರೆದೊಯ್ದ ಸುವರ್ಣ, ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾರೆ. ಬಹಳ ಹೊತ್ತಾದರೂ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ವೈಟ್‌ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಸುವರ್ಣ ಅವರು ಮೊದಲು ಮಗಳು ಕಾರುಣ್ಯಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ, ನಂತರ ಅದೇ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುವರ್ಣ ಅವರ ಪತಿ ವೃತ್ತಿಯಲ್ಲಿ ಚಾಲಕರಾಗಿದ್ದು, ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲವಾದರೂ, ಪೊಲೀಸರು ಸುವರ್ಣ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಸಮಸ್ಯೆ ಅಥವಾ ಮಾನಸಿಕ ಖಿನ್ನತೆಯೇ ಈ ಘಟನೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm