ಬ್ರೇಕಿಂಗ್ ನ್ಯೂಸ್
15-04-26 11:40 pm HK News Desk ಕ್ರೈಂ
ಬೆಂಗಳೂರು, ಏ 15: ಇಡೀ ರಾಜ್ಯವೇ ಎದುರು ನೋಡುತ್ತಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಕೊನೆಗೂ ಪ್ರಕಟವಾಗಿದೆ. ಸುದೀರ್ಘ ಕಾನೂನಿನ ಹೋರಾಟದ ನಂತರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಬಿಐ ಅಧಿಕಾರಿಗಳಿಗೆ ಸೂಚನೆ ನೀಡಿದೆ.
2016ರ ಜೂನ್ 15ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.
ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ಇಂದು ಪ್ರಕರಣ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಿದ್ದರು.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ವಿನಯ್ ಕುಲಕರ್ಣಿ ಎ15 ಆರೋಪಿಯಾಗಿದ್ದು ಒಳಸಂಚು ಹಿನ್ನೆಲೆಯಲ್ಲಿ ಅಪರಾಧಿ ಎಂದು ಘೋಷಿಸಲಾಗಿದೆ.
ಸೆಪ್ಟೆಂಬರ್ 2019ರಲ್ಲಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡ ಇದೆ ಎಂದು ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ, ಕುಲಕರ್ಣಿ ಅವರನ್ನು 2021ರ ಆಗಸ್ಟ್ 13ರಂದು ಬಿಡುಗಡೆ ಮಾಡಲಾಯಿತು. ಸದ್ಯ ವಿನಯ್ ಕುಲಕರ್ಣಿ ಅವರು 2025ರ ಜೂನ್ 13 ರಿಂದ ಜೈಲಿನಲ್ಲಿದ್ದಾರೆ.
ನಿಮ್ಮ ಹಣ, ಅಧಿಕಾರ ಯಾವತ್ತೂ ಶಾಶ್ವತ ಅಲ್ಲಾ. ಇಂದು ನ್ಯಾಯ ಗೆದ್ದಿದೆ. ನಮ್ಮ ತಮ್ಮನ ಆತ್ಮಕ್ಕೆ ಶಾಂತಿ ಸಿಕ್ಕಿದೆ. ಯೋಗೇಶ್ ಗೌಡ ಪರ ತೀರ್ಪು ಖುಷಿ ಕೊಟ್ಟಿದೆ. ಇಷ್ಟು ವರ್ಷ ನಾವು ಪಟ್ಟ ಕಷ್ಟಕ್ಕೆ ದೇವರು ಈಗ ನಮ್ಮ ಜೊತೆಗೆ ನಿಂತಿದ್ದಾನೆ ಎಂದು ಯೋಗೇಶ್ ಗೌಡ ನೆನೆದು ಯೋಗೇಶ್ ಗೌಡ ಅಕ್ಕ ಅಕ್ಕಮ್ಮ ಕಣ್ಣೀರಿಟ್ಟಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm