ಬ್ರೇಕಿಂಗ್ ನ್ಯೂಸ್
16-04-26 11:21 am HK News Staffer ಕ್ರೈಂ
ರಾಯಚೂರು, ಏಪ್ರಿಲ್ 16: ಮಂತ್ರಾಲಯ ದರ್ಶನಕ್ಕೆ ತೆರಳಿದ್ದ ಕರ್ನಾಟಕದ ಭಕ್ತರ ಬಾಳಲ್ಲಿ ಭಾರೀ ದುರಂತ ಸಂಭವಿಸಿದೆ. ಕರ್ನೂಲ್ ಜಿಲ್ಲೆಯ ಚಿಲಕನಡೋಣ ಸಮೀಪ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ದುರ್ಮರಣ ಹೊಂದಿದ್ದು, ಹಲವರು ಗಾಯಗೊಂಡಿದ್ದಾರೆ.
ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ಬುಲೆರೋ ವಾಹನಕ್ಕೆ ಎದುರುಗಡೆಯಿಂದ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ಜಜ್ಜುಗುಜ್ಜಾಗಿದ್ದು, 8 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಲಾರಿ ಹಾಗೂ ಬುಲೆರೋ ನಡುವೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಕರ್ನೂಲ್ ಮತ್ತು ಎಮಿಗನೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಆತಂಕಕಾರಿ ಎನ್ನಲಾಗಿದೆ.



ಮೃತರಲ್ಲಿ ಮಹಿಳೆಯರು, ಪುರುಷರು ಹಾಗೂ ಪುಟ್ಟ ಮಗು ಕೂಡ ಸೇರಿರುವುದು ದುರಂತದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕುಮಾರ್, ದೀಪಿಕಾ, ವೀಣಾ, ಸುನೀಲ್, ಯಶೋಧಮ್ಮ, ಪುಟ್ಟಮ್ಮ, ಲೋಲಾಕ್ಷಿ ಹಾಗೂ ಬಾಲಕಿ ಬೆಳ್ಳಿ ಮೃತಪಟ್ಟವರು.
ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಿಂದ ಒಟ್ಟು 18-21 ಮಂದಿ ಭಕ್ತರು ರಾಯರ ದರ್ಶನಕ್ಕಾಗಿ ಹೊರಟಿದ್ದರು. ಭಕ್ತಿಭಾವದಿಂದ ಆರಂಭವಾದ ಈ ಯಾತ್ರೆ ಕ್ಷಣಾರ್ಧದಲ್ಲಿ ಕಣ್ಣೀರು ಮತ್ತು ವಿಯೋಗದ ದಾರಿಯಾಯಿತು.
ಟ್ಯಾಂಕರ್ ಹಾಗೂ ಬುಲೆರೋ ನಡುವೆ ಡಿಕ್ಕಿ ಸಂಭವಿಸಿದ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಚಾಲಕರ ನಿರ್ಲಕ್ಷ್ಯವೇ, ಅತಿವೇಗವೇ ಅಥವಾ ರಸ್ತೆ ಪರಿಸ್ಥಿತಿಯೇ ಕಾರಣ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಈ ದುರ್ಘಟನೆಯಿಂದ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕುಟುಂಬಗಳು ಶೋಕಸಾಗರದಲ್ಲಿ ಮುಳುಗಿವೆ. ದರ್ಶನಕ್ಕಾಗಿ ಸಂತೋಷದಿಂದ ಹೊರಟ ಭಕ್ತರು ಮರಳದೇ ಹೋದ ನೋವು ಕುಟುಂಬಗಳನ್ನು ಕಲುಕಿದೆ.
ಮಂತ್ರಾಲಯ ಮಾರ್ಗದಲ್ಲಿ ರಾತ್ರಿ ಹಾಗೂ ಮುಂಜಾನೆ ವೇಳೆ ಭಾರೀ ವಾಹನ ಸಂಚಾರ ಹೆಚ್ಚಿರುವ ಹಿನ್ನೆಲೆ, ಪ್ರಯಾಣಿಕರು ಹೆಚ್ಚುವರಿ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂಬುದನ್ನು ಈ ದುರಂತ ಮತ್ತೊಮ್ಮೆ ನೆನಪಿಸಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm