ಬ್ರೇಕಿಂಗ್ ನ್ಯೂಸ್
19-04-26 10:20 am HK News Staffer ಕ್ರೈಂ
ಉಳ್ಳಾಲ, ಏ.19: ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದ ಬಾಲಕನೋರ್ವ ಪಕ್ಕದ ನಾಲೆಯೊಂದರ ಕೆಸರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ನಡೆದಿದೆ.
ಅಂಬ್ಲಮೊಗರು ಗ್ರಾಮದ ಜರಿ ಹೌಸ್ ನಿವಾಸಿ ಶಿವರಾಮ್ ಅವರ ಪುತ್ರ ಸೃಜನ್(17) ಮೃತಪಟ್ಟ ಬಾಲಕ. ಸೃಜನ್ ಫ್ರಥಮ ಪಿಯುಸಿ ಮುಗಿಸಿದ್ದು ಬೇಸಿಗೆ ರಜೆ ಇದ್ದ ಕಾರಣ ಶನಿವಾರ ಮಧ್ಯಾಹ್ನ ತನ್ನ ಮೂವರು ಸ್ನೇಹಿತರೊಂದಿಗೆ ಅಂಬ್ಲಮೊಗರುವಿನ ಖಂಡಿಲ ಎಂಬಲ್ಲಿನ ಖಾಸಗಿ ವಿವಿಗೆ ಸೇರಿದ ಜಮೀನಿನ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದನೆನ್ನಲಾಗಿದೆ. ಬಳಿಕ ಕೈಕಾಲು ತೊಳೆಯಲು ಪಕ್ಕದ ನಾಲೆಯೊಂದಕ್ಕೆ ಸೃಜನ್ ಏಕಾಂಗಿಯಾಗಿ ಇಳಿದಿದ್ದು, ಈ ವೇಳೆ ಆತನ ಕಾಲುಗಳು ನಾಲೆಯ ಕೆಸರಿನಲ್ಲಿ ಮುಳುಗಿವೆ. ಸೃಜನ್ ನನ್ನು ಮತ್ತೋರ್ವ ಸ್ನೇಹಿತ ರಕ್ಷಿಸಲು ಪ್ರಯತ್ನಿಸಿದ್ದು ಆತನೂ ಕೆಸರಿನಲ್ಲಿ ಮುಳುಗುತ್ತಾನೆ ಎಂದಾಗ ಉಳಿದ ಸ್ನೇಹಿತರು ಆತನನ್ನ ಎಳೆದು ರಕ್ಷಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾದ ಬಾಲಕರು ವಿಚಾರವನ್ನು ಯಾರಲ್ಲೂ ತಿಳಿಸದೆ ತಮ್ಮ ಮನೆ ಸೇರಿದ್ದರು. ರಾತ್ರಿ 8 ಗಂಟೆಯಾದರೂ ಸೃಜನ್ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿ ಸ್ನೇಹಿತರಲ್ಲಿ ವಿಚಾರಿಸಿದಾಗ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಕೊಣಾಜೆ ಪೊಲೀಸರು ಧಾವಿಸಿ ಸೃಜನ್ ಗಾಗಿ ನಾಲೆಯಲ್ಲಿ ಶೋಧ ನಡೆಸಿದ್ದಾರೆ. ನಾಲೆಯಲ್ಲಿ ಭಾರೀ ಹೂಳು ತುಂಬಿದ್ದರಿಂದ ರಕ್ಷಣಾ ಕಾರ್ಯವೂ ಕಷ್ಟವಾಗಿತ್ತು. ರಾತ್ರಿ ವೇಳೆ ನಿರ್ಜನ ಪ್ರದೇಶದಲ್ಲಿ ರಕ್ಷಣಾ ಕಾರ್ಯಕ್ಕೆ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಟಿಪ್ಪರ್ ಲಾರಿಗಳ ಹೆಡ್ ಲೈಟ್ ಸಹಾಯದಿಂದ ಮಧ್ಯರಾತ್ರಿ ವರೆಗೂ ಕಾರ್ಯಾಚರಣೆ ನಡೆಸಲಾಗಿತ್ತು. ಉತ್ತರ ಭಾರತದ ನುರಿತ ಕಾರ್ಮಿಕರು ಹರಸಾಹಸ ಪಟ್ಟು ಕೊನೆಗೂ ಮಧ್ಯರಾತ್ರಿ ಬಾಲಕನ ಮೃತದೇಹವನ್ನ ನಾಲೆಯಿಂದ ಮೇಲಕ್ಕೆತ್ತಿದ್ದಾರೆ.
ಮೃತ ಸೃಜನ್ ತಂದೆ ರಿಕ್ಷಾ ಚಾಲಕರಾಗಿದ್ದು, ತಾಯಿ ಜಯಲಕ್ಷ್ಮಿ ಅಂಬ್ಲಮೊಗರು ಗಾಂಧಿನಗರದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿದ್ದಾರೆ. ದಂಪತಿಗೆ ಸೃಜನ್ ಹಿರಿಯ ಮಗನಾಗಿದ್ದು, ಮತ್ತೋರ್ವ ಮಗಳು ಇದ್ದಾಳೆ. ಕೊಣಾಜೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm