ಬ್ರೇಕಿಂಗ್ ನ್ಯೂಸ್
19-04-26 02:58 pm HK News Staffer ಕ್ರೈಂ
ಶಿವಮೊಗ್ಗ, ಎಪ್ರಿಲ್ 19: ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆಯೊಂದು ಯುವಕನ ಗಂಟಲಲ್ಲಿ ಸಿಲುಕಿದ್ದರಿಂದ 21 ವರ್ಷದ ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚನ್ನಹಳ್ಳಿಯಲ್ಲಿ ನಡೆದಿದೆ.
ಯುವಕನನ್ನು ಚೆನ್ನಹಳ್ಳಿ ಗ್ರಾಮದ ನಿವಾಸಿ ಸಚಿನ್ (21) ಎಂದು ಗುರುತಿಸಲಾಗಿದೆ. ಏಪ್ರಿಲ್ 17ರಂದು ರಾತ್ರಿ ಗ್ರಾಮಸ್ಥರೊಬ್ಬರ ಜನ್ಮದಿನದ ಹಿನ್ನೆಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಬಳಿ ಗೆಳೆಯರಿಗೆ ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು. ಪಾರ್ಟಿ ಮುಗಿಸಿ ಉಳಿದವರೆಲ್ಲರೂ ತಮ್ಮ ಮನೆಗಳಿಗೆ ತೆರಳಿದ್ದರೆ, ಸಚಿನ್ ಮಾತ್ರ ಅದೇ ಕಟ್ಟಡದಲ್ಲಿಯೇ ಉಳಿದುಕೊಂಡಿದ್ದ. ಮರುದಿನ ಬೆಳಗ್ಗೆ ಕಟ್ಟಡ ಕಾಮಗಾರಿ ಮುಂದುವರಿಸಲು ಕಾರ್ಮಿಕರು ಬಂದಾಗ ಸಚಿನ್ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಕುಟುಂಬಸ್ಥರು ಆತನನ್ನು ಶಿವಮೊಗ್ಗಕ್ಕೆ ಕೊಂಡೊಯ್ದರೂ, ಅದಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ.
ಸ್ಥಳಕ್ಕೆ ಭೇಟಿ ನೀಡಿದ ಕುಂಸಿ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಸಚಿನ್ ಮದ್ಯಪಾನ ಮಾಡಿದ್ದರಿಂದ ಆಹಾರ ಸೇವನೆಯ ವೇಳೆ ಅಜಾಗರೂಕತೆಯಿಂದ ಗಂಟಲಲ್ಲಿ ಮೂಳೆ ಸಿಲುಕಿದೆ. ಇದು ಶ್ವಾಸನಾಳವನ್ನು ತಡೆದಿದ್ದರಿಂದ ಉಸಿರಾಟ ಸ್ಥಗಿತಗೊಂಡು ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm