ಬ್ರೇಕಿಂಗ್ ನ್ಯೂಸ್
22-04-26 02:15 pm HK News Staffer ಕ್ರೈಂ
ಮಡಿಕೇರಿ, ಎಪ್ರಿಲ್ 22: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ವಿರಾಜಪೇಟೆ ತಾಲೂಕಿನ ಕುಟ್ಟ ಎಂಬಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ರೆಸಾರ್ಟ್ ಒಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು ಘಟನೆ ಹಿನ್ನೆಲೆಯಲ್ಲಿ ಪೊಲೀಸರು ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಅಮೆರಿಕದ ವಾಷಿಂಗ್ಟನ್ ನಗರದಿಂದ ಪ್ರವಾಸ ಬಂದಿದ್ದ ಮಹಿಳೆಗೆ ಮತ್ತು ಬರುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬ ಕಾರ್ಮಿಕ ಕೃತ್ಯ ಎಸಗಿದವನಾಗಿದ್ದು ಮತ್ತು ಹೋಂಸ್ಟೇ ಮಾಲೀಕ ವಿಶಾಲ್ ಎಂಬ ಇಬ್ಬರನ್ನೂ ಬಂಧಿಸಲಾಗಿದೆ.
ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿದ್ದ ಜಾರ್ಖಂಡ್ ಮೂಲದ ವ್ಯಕ್ತಿ ವೃಜೇಶ್ ಕುಮಾರ್ ಸಿಹಿ ಪಾನಕಕ್ಕೆ ಮತ್ತು ಬರುವ ಔಷಧಿ ಬೆರಸಿ ಮಹಿಳೆಗೆ ನೀಡಿದ್ದಾನೆ. ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಗಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ.
ವಿಷಯ ತಿಳಿದ ಹೋಮ್‌ಸ್ಟೇ ಮಾಲೀಕ ವಿಶಾಲ್ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದು ಮೂರು ದಿನಗಳ ಕಾಲ ಸಂತ್ರಸ್ತೆ ಯಾರನ್ನೂ ಸಂಪರ್ಕ ಮಾಡದಂತೆ ತಡೆದಿದ್ದ. ಹೋಂ ಸ್ಟೇಯಲ್ಲಿದ್ದ ವೈಫೈಯನ್ನೂ ಕಡಿತ ಮಾಡಿದ್ದ. ಮೂರು ದಿನದ ಬಳಿಕ ಸಂತ್ರಸ್ತ ಯುವತಿ ಮೈಸೂರಿಗೆ ಹೋಗುವುದಾಗಿ ಹೇಳಿ ಹೊರಟಿದ್ದರು. ಮೈಸೂರಿಗೆ ತೆರಳಿದ ನಂತರ ಅಮೆರಿಕದ ರಾಯಭಾರ ಕಚೇರಿಯನ್ನ ಸಂಪರ್ಕಿಸಿ, ಮಾಹಿತಿ ನೀಡಿದ್ದಾರೆ. ಬಳಿಕ ಇ-ಮೇಲ್ ಮೂಲಕ ಮೈಸೂರಿನ ಅಧಿಕಾರಿಗಳನ್ನ ಸಂಪರ್ಕಿಸಿದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳು ಪ್ರಕರಣ ದಾಖಲಿಸಲು ಹೇಳಿದ್ದಾರೆ. ಅಧಿಕಾರಿಗಳ ಸೂಚನೆ ಮೇರೆಗೆ ಮೈಸೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ದೆಹಲಿ ಹಾಗೂ ಚೆನ್ನೈನಿಂದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm