ಬ್ರೇಕಿಂಗ್ ನ್ಯೂಸ್
25-04-26 02:05 pm HK News Staffer ಕ್ರೈಂ
ಉಡುಪಿ, ಏಪ್ರಿಲ್ 25: ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಘಟನೆ ತಡರಾತ್ರಿ ನಡೆದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೈಡ್ರಾಮಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ದೇಶದ ವಿವಿಧ ಭಾಗಗಳಿಂದ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಮಣಿಪಾಲಕ್ಕೆ ಆಗಮಿಸುತ್ತಾರೆ. ಆದರೆ, ಹೈಟೆಕ್ ವಾತಾವರಣ ಮತ್ತು ಪಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಕೆಲವರು ಸಾರ್ವಜನಿಕ ಸ್ಥಳ ಎಂಬ ಅರಿವಿಲ್ಲದೆ ವರ್ತಿಸುತ್ತಿರುವುದು ಸ್ಥಳೀಯರಲ್ಲಿ ಅಸಮಾಧಾನ ಹುಟ್ಟಿಸಿದೆ. ಇದೇ ರೀತಿ ಸಾರ್ವಜನಿಕ ರಸ್ತೆಯಲ್ಲೇ ಪ್ರಣಯ ಸಲ್ಲಾಪದಲ್ಲಿ ತೊಡಗಿದ್ದ ಈ ಜೋಡಿಯನ್ನು ಕಂಡ ಸ್ಥಳೀಯರು ತಕ್ಷಣವೇ ತರಾಟೆಗೆ ತೆಗೆದುಕೊಂಡಿದ್ದಾರೆ.
ಸ್ಥಳೀಯರು ಪ್ರಶ್ನಿಸಿದ ವೇಳೆ ಜೋಡಿ ಅಸಹಜವಾಗಿ ಪ್ರತಿಕ್ರಿಯಿಸಿದ್ದು, ಮಾತಿನ ಚಕಮಕಿಯೂ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದು ಹಂಚಿಕೊಂಡಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ಹೊಸ ವರ್ಷ ಅಥವಾ ವ್ಯಾಲೆಂಟೈನ್ಸ್ ಡೇ ಸಂದರ್ಭಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ ಎಂಬ ಅಸಮಾಧಾನ ವ್ಯಕ್ತಪಡಿಸಿರುವ ಉಡುಪಿ ಜನತೆ, ಮಣಿಪಾಲದ ಗೌರವಕ್ಕೆ ಧಕ್ಕೆಯಾಗುವಂತಹ ವರ್ತನೆಗಳನ್ನು ತಕ್ಷಣವೇ ನಿಯಂತ್ರಿಸಬೇಕು ಎಂದು ಆಗ್ರಹಿಸಿದ್ದಾರೆ. ಇಂತಹ ಘಟನೆಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.
ಸಾರ್ವಜನಿಕ ಸ್ಥಳದಲ್ಲಿ ಸ್ವಾತಂತ್ರ್ಯಕ್ಕಿಂತ ಜವಾಬ್ದಾರಿ ಮುಖ್ಯ. ಮಣಿಪಾಲದ ಈ ಘಟನೆ ಸಮಾಜದ ಮಿತಿಗಳ ಕುರಿತು ಮತ್ತೆ ಚರ್ಚೆ ಎಬ್ಬಿಸಿದೆ.
Shocking & unacceptable! A couple caught indulging in highly indecent behavior in public in Manipal. This is not PDA, this is openly disrespecting Indian culture, public decency, and the people around.
— ಸನಾತನ (सनातन) (@sanatan_kannada) April 24, 2026
Manipal is an education hub students & families deserve better. Where are the… pic.twitter.com/8zJ9n9AsLo
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm