ಬ್ರೇಕಿಂಗ್ ನ್ಯೂಸ್
26-04-26 12:45 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 26: ಮದುವೆ ಸಂಭ್ರಮದ ನಡುವೆ ಖದೀಮರು ಕೈಚಳಕ ತೋರಿಸಿ ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರುನಲ್ಲಿ ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ವೈದ್ಯೆ ಸಿರುವೆಲ್ಲ ಶ್ರೀದೇವಿ ಅವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲೇ ದೋಚಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಿರುವೆಲ್ಲ ಶ್ರೀದೇವಿ ಅವರು ತಮ್ಮ ಸಹೋದರನ ಮಗನ ಮದುವೆಗೆ ಏಪ್ರಿಲ್ 18ರಂದು ಬೆಂಗಳೂರಿಗೆ ಆಗಮಿಸಿದ್ದರು. ಬಳ್ಳಾರಿ ರಸ್ತೆಯ ಗಂಗಾನಗರದಲ್ಲಿರುವ ತಮ್ಮ ಸಹೋದರರ ಮನೆಯಲ್ಲಿ ತಂಗಿದ್ದ ಅವರು, ಬುಧವಾರ ಬೆಳಗ್ಗೆ ಬಿಡರಹಳ್ಳಿಯ ಓಲ್ಡ್ ಮದ್ರಾಸ್ ರಸ್ತೆಯ ಎಸ್‌ಡಿಪಿ ಪ್ಯಾಲೆಸ್ ಮಂಟಪಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಅವರ ಸಹೋದರರು ಚಿನ್ನಾಭರಣಗಳಿದ್ದ ಪೆಟ್ಟಿಗೆಯನ್ನು ಮಂಟಪದಲ್ಲೇ ನೀಡಿದ್ದರು. ಕೆಲವು ಆಭರಣಗಳನ್ನು ಧರಿಸಿದ ಅವರು ಉಳಿದವುಗಳನ್ನು ಕೊಠಡಿಯಲ್ಲಿ ಇಟ್ಟು ಬಾಗಿಲು ಲಾಕ್ ಮಾಡಿ ಸ್ವಾಗತ ಕಾರ್ಯಕ್ರಮಕ್ಕೆ ತೆರಳಿದ್ದರು.
ಆದರೆ ಕೊಠಡಿ ಲಾಕ್ ಆಗಿದ್ದರೂ ಸುಮಾರು 725 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೀಲಿ ದೂರುದಾರರಲ್ಲೇ ಇದ್ದುದರಿಂದ, ಪರಿಚಿತರಾದವರು ಅಥವಾ ಕುಟುಂಬದವರಲ್ಲಿ ಯಾರಾದರೂ ಈ ಕೃತ್ಯ ಎಸಗಿರುವ ಸಾಧ್ಯತೆಯೂ ಪೊಲೀಸ್ ವಲಯದಲ್ಲಿ ವ್ಯಕ್ತವಾಗಿದೆ.
ಘಟನೆಯ ಕುರಿತು ದೂರು ದಾಖಲಿಸಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಕೊಠಡಿಗೆ ಪ್ರವೇಶ ಹೊಂದಿದ್ದವರ ವಿಚಾರಣೆ ನಡೆಸುತ್ತಿದ್ದಾರೆ. ಮಂಟಪದ ಸಿಬ್ಬಂದಿಯ ಪಾತ್ರ ಇಲ್ಲ ಎಂದು ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದು, ತನಿಖೆಗೆ ಸಹಕರಿಸುತ್ತಿದ್ದಾರೆ.
ಈ ಕುರಿತು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಆದಾವತ್ ಮಾಹಿತಿ ನೀಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm