ಬ್ರೇಕಿಂಗ್ ನ್ಯೂಸ್
30-04-26 12:31 pm HK News Staffer ಕ್ರೈಂ
ಹಾಸನ, ಎಪ್ರಿಲ್ 30: ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮನು ಎಲ್.ಎನ್. (29) ಮೃತಪಟ್ಟ ಯುವಕ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದು ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿತ್ತು.



ಎರಡು ಕುಟುಂಬಗಳಲ್ಲಿಯೂ ಮದುವೆ ಸಂಭ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಇಂದು ಬೆಳಗ್ಗೆ ಮನು ಪ್ರೀ ವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಮೂಗಲಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಮನು ಅವರು ಪ್ರೀ ವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರಿಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು. ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm