ಬ್ರೇಕಿಂಗ್ ನ್ಯೂಸ್
01-05-26 10:30 am HK News Staffer ಕ್ರೈಂ
ರಾಮನಗರ, ಮೇ 01: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಬ್ಲಾಸ್ಟ್ ಆಗುವ ದೃಶ್ಯ ಹೊಂದಿರುವ ರೀಲ್ಸ್ ಮಾಡಿರುವ ಬಗ್ಗೆ ರಜತ್ ವಿರುದ್ಧ ಕನಕಪುರದ ಕಗ್ಗಲೀಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ರಜತ್, ಇತ್ತೀಚೆಗೆ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಈ ರೀಲ್ಸ್ ಅಪ್ಲೋಡ್ ಮಾಡಿದ್ದರು. ಬೈಕ್ನಲ್ಲಿ ಸ್ಟೈಲ್ ಆಗಿ ಬರುವ ರಜತ್ ಹಿಂದೆ ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಸ್ಫೋಟವಾಗುವ ದೃಶ್ಯ ಇದಾಗಿತ್ತು. ಆ ರೀಲ್ಸ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ತಮ್ಮ ತಪ್ಪು ಅರಿತು ರಜತ್ ಕ್ಷಮೆ ಸಹ ಕೇಳಿದ್ದರು. ಆದರೀಗ, ಬಿಗ್ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ:
ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ರಸ್ತೆಯ ವಡೇರಹಳ್ಳಿಯ ಸಾರ್ವಜನಿಕ ರಸ್ತೆಯಲ್ಲಿ ರಜತ್ ಹಾಗೂ ತಂಡ ರೀಲ್ಸ್ ಶೂಟ್ ಮಾಡಿದ್ದರು. ರೀಲ್ಸ್ ಆಕರ್ಷಕವಾಗಿ ಮೂಡಿ ಬರಲೆಂದು ಬ್ಲಾಸ್ಟ್ ಸಹ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಗ್ಗಲೀಪುರ ಪೊಲೀಸರು ರಜತ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಇದೇ ದಿನ ರಜತ್, ರೀಲ್ಸ್ ಶೂಟಿಂಗ್ ಮಾಡಿದ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ತನಿಖೆಯನ್ನು ಸಹ ನಡೆಸಿದ್ದಾರೆ. ರಜತ್ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ.
ಡಿವೈಎಸ್ಪಿ ಪ್ರತಿಕ್ರಿಯೆ:
ಈ ಘಟನೆ ಕುರಿತು ಡಿವೈಎಸ್ಪಿ ಶ್ರೀನಿವಾಸ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ರಜತ್ ಅವರು ಸಾರ್ವಜನಿಕ ಶಾಂತಿಗೆ ಭಂಗ, ಅನುಚಿತ ವರ್ತನೆ, ರಸ್ತೆ ನಿಯಮ ಉಲ್ಲಂಘನೆ, ಸಾರ್ವಜನಿಕ ಆಸ್ತಿಗೆ ನಷ್ಟ ಮಾಡಿದ್ದಾರೆ. ಬಿಎನ್ಎಸ್ನ ವಿವಿಧ ಕಲಂಗಳ ಅಡಿಯಲ್ಲಿ ರಜತ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಿದ್ದೇವೆ. ರಜತ್ ಅವರಿಗೆ ನೋಟಿಸ್ ನೀಡಿ, ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಹಿಂದಿನ ಪ್ರಕರಣ:
ರಜತ್ ಈ ಹಿಂದೊಮ್ಮೆ ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದರು. ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ವಿಡಿಯೋ ಮಾಡಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇಬ್ಬರ ವಿರುದ್ಧ ಕಳೆದ ಮಾರ್ಚ್ ತಿಂಗಳಿನಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಬಸವೇಶ್ವರ ನಗರ ಠಾಣೆ ಪೊಲೀಸರು, ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರು. ಬಳಿಕ ಇಬ್ಬರಿಗೂ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಮತ್ತು ಇದೇ ರೀತಿಯಾಗಿ ಮತ್ತೆ ಘಟನೆ ಮರುಕಳಿಸಬಾರದೆಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿತ್ತು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm