ಬ್ರೇಕಿಂಗ್ ನ್ಯೂಸ್
02-05-26 12:19 pm HK News Staffer ಕ್ರೈಂ
ಮಂಗಳೂರು, ಮೇ 02: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ವಿಶೇಷ ನ್ಯಾಯಾಲಯವು ಅಪರಾಧಿ ಮೊಹಮ್ಮದ್ ಶಾರೀಕ್‌ಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದರೂ, ಭದ್ರತಾ ದೃಷ್ಟಿಯಿಂದ ಈ ಶಿಕ್ಷೆ ಸಾಕಾಗುವುದಿಲ್ಲ ಎಂದು ಜೀವಾವಧಿ ಶಿಕ್ಷೆಗೆ ಬದಲಾಯಿಸಲು ಎನ್‌ಐಎ ಇದೀಗ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ.
2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಪ್ರದೇಶದಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಭೀಕರ ಸ್ಫೋಟಗೊಂಡಿತ್ತು. ಶಾರೀಕ್ ಸಾಗಿಸುತ್ತಿದ್ದ ಕುಕ್ಕರ್ ಬಾಂಬ್ ಅಚಾನಕ್ ಆಗಿ ಆಟೋದಲ್ಲೇ ಸ್ಫೋಟಗೊಂಡಿತ್ತು. ತನಿಖೆಯಲ್ಲಿ ವೇಳೆ ಶಾರಿಕ್ ಹಲವು ಶಂಕಿತ ಉಗ್ರ ಸಂಘಟನೆಗಳ ಸಂಪರ್ಕದಲ್ಲಿದ್ದ ಎಂಬ ಅಂಶಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಹತ್ತು ವರ್ಷದ ಶಿಕ್ಷೆಯ ಬಳಿಕ ಅವನನ್ನು ಸಮಾಜಕ್ಕೆ ಮತ್ತೆ ಬಿಡುಗಡೆ ಮಾಡಿದರೆ ಭದ್ರತಾ ಅಪಾಯ ಹೆಚ್ಚಾಗಬಹುದು ಎಂಬ ಆತಂಕವನ್ನು ಎನ್‌ಐಎ ವ್ಯಕ್ತಪಡಿಸಿದೆ.
ಶಾರಿಕ್ ಸದ್ಯ 27 ವರ್ಷದವನಿದ್ದು ಈಗಾಗಲೇ ಮೂರು ವರ್ಷ ಜೈಲಿನಲ್ಲಿ ಕಳೆದಿದ್ದಾನೆ. ಶಿಕ್ಷೆಯ ಅವಧಿ ಪೂರ್ಣಗೊಂಡ ನಂತರವೂ 33 ವರ್ಷದವನಿರುವುದರಿಂದ, ಅವನನ್ನು ಉಗ್ರ ಸಂಘಟನೆಗಳು ಮತ್ತೆ ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆಯೆಂದು ಅಧಿಕಾರಿಗಳು ಗಂಭೀರ ಚಿಂತನೆಯಲ್ಲಿದ್ದಾರೆ. ಈ ಕಾರಣದಿಂದಲೇ ಜೀವಾವಧಿ ಶಿಕ್ಷೆ ಅಗತ್ಯವೆಂದು ಎನ್‌ಐಎ ವಾದಿಸಲು ಮುಂದಾಗಿದೆ.
2020ರಲ್ಲಿ ಶಾರೀಕ್ ಮತ್ತು ಸಹಚರರು ಮಂಗಳೂರಿನಲ್ಲಿ ಉಗ್ರ ಪರ ಗೋಡೆ ಬರಹ ಪ್ರಕರಣದಲ್ಲಿ ಬಂಧಿತರಾಗಿದ್ದರೂ, ಸಾಕ್ಷ್ಯ ಸಂಗ್ರಹ ಮತ್ತು ತನಿಖೆ ಸಮರ್ಪಕವಾಗಿ ನಡೆಯಲಿಲ್ಲ ಎಂಬ ಆರೋಪಗಳಿವೆ. ಇದೇ ಕಾರಣದಿಂದ ಪ್ರಕರಣ ದುರ್ಬಲವಾಗಿ, ಆರೋಪಿಗಳಿಗೆ ಜಾಮೀನು ದೊರೆತಿತ್ತು ಎಂದು ಹೇಳಲಾಗುತ್ತಿದೆ.
ಜಾಮೀನು ಬಳಿಕ ಶಾರೀಕ್ ಮತ್ತಷ್ಟು ಶಂಕಿತ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ನಂತರ ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್ ಮತ್ತು ಅಂತಿಮವಾಗಿ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ವರೆಗೆ ಘಟನೆಗಳು ನಡೆದಿದ್ದವು. ಆರಂಭಿಕ ಹಂತದಲ್ಲೇ ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐಗೆ ಒಪ್ಪಿಸಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ನಡುವೆ, ಅಂದಿನ ತನಿಖೆಯ ವೇಳೆ ಲೋಪಗಳಿಗೆ ಕಾರಣವಾದ ಅಂಶಗಳ ಬಗ್ಗೆ ಗಂಭೀರ ಆರೋಪಗಳೂ ಕೇಳಿಬಂದಿವೆ. ಆದರೆ ಇವುಗಳನ್ನು ಸ್ವತಂತ್ರ ತನಿಖೆಯಿಂದ ಮಾತ್ರ ದೃಢಪಡಿಸಬೇಕಿದೆ. ಗಂಭೀರ ಸ್ವರೂಪದ ಪ್ರಕರಣ ಆಗಿದ್ದರೂ, ಗೋಡೆ ಬರಹ ಪ್ರಕರಣದಲ್ಲಿ ಜಾಮೀನು ನೀಡಲಾಗಿತ್ತು. ಎನ್ಐಎ ತನಿಖೆಯೂ ಆಗಿರಲಿಲ್ಲ. ಹೀಗಾಗಿ ಜಾಮೀನಿನಲ್ಲಿ ಹೊರಬಂದು ಮತ್ತೆ ಐಸಿಸ್ ಉಗ್ರರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm