ಬ್ರೇಕಿಂಗ್ ನ್ಯೂಸ್
06-05-26 10:44 am HK News Desk ಕ್ರೈಂ
ದೊಡ್ಡಬಳ್ಳಾಪುರ, ಮೇ 06: ನಿರ್ಜನ ಪ್ರದೇಶದಲ್ಲಿ ಕಾರೊಂದು ಹೊತ್ತಿ ಉರಿದಿದೆ. ಸುಟ್ಟುಕರಕಲಾದ ಕಾರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ನಡೆದ ಅನತಿ ದೂರದಲ್ಲಿ ಪುರುಷನೊಬ್ಬನ ಸುಟ್ಟ ಬಟ್ಟೆ ಮೊಬೈಲ್ ಪತ್ತೆಯಾಗಿದೆ. ಸ್ಥಳದಿಂದ ಪರಾರಿಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ದೊಡ್ಡಬಳ್ಳಾಪುರ ತಾಲೂಕಿನ ಕೆ.ಜಿ ಕುಂಟನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ನಡೆದ ಕೆಲವೇ ತಾಸಿನಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಇಂಚಿಂಚು ಮಾಹಿತಿಯನ್ನ ಹೊರಗೆ ತಂದಿದ್ದಾರೆ. ಅಂದ ಹಾಗೇ ಇಲ್ಲಿ ಸುಟ್ಟುಕರಕಲಾದ ಸ್ಥಿತಿಯಲ್ಲಿ ಸಿಕ್ಕ ಮಹಿಳೆ ಹೆಸರು ಸರೋಜಾ ಎಂದು ಪೊಲೀಸರು ಗುರುತಿಸಿದ್ದಾರೆ. ದೇವನಹಳ್ಳಿಯ ಪಿಯು ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಎಸ್ಪಿ ಚಂದ್ರಕಾಂತ್ ಮಾಹಿತಿ ನೀಡಿದ್ದಾರೆ.
ದೇವನಹಳ್ಳಿಯಲ್ಲಿ ವಾಸವಾಗಿರುವ ಸರೋಜಾಗೆ ಮದುವೆಯಾಗಿ ಒಬ್ಬ ಮಗನಿದ್ದಾನೆ. ಗಂಡ ಏರ್ ಪೋರ್ಟ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ 2ರಂದು ಹಲ್ಲಿನ ಸಮಸ್ಯೆ ಇದೆ, ಆಸ್ಪತ್ರೆಗೆ ಹೋಗಬೇಕೆಂದು ಗಂಡನಿಗೆ ಹೇಳಿ ಬಸ್ ನಿಲ್ದಾಣಕ್ಕೆ ಡ್ರಾಪ್ ಹಾಕಿಸಿಕೊಂಡಿದ್ದ ಸರೋಜಾ, ಮಾರ್ಗ ಮಧ್ಯದಲ್ಲಿ ಇಳಿದು ಪ್ರಿಯಕರನ ಜೊತೆಯಲ್ಲಿ ಕಾರಿನಲ್ಲಿ ಹೊರಟಿದ್ದಾಳೆ.
ಪ್ರಿಯಕರ ರಾಮಾಂಜಿನಪ್ಪ ಯಲಹಂಕ ತಾಲೂಕಿನ ಮಾರಸಂದ್ರ ಗ್ರಾಮದ ನಿವಾಸಿ, ಈತನಿಗೂ ಮದುವೆಯಾಗಿ ಒಬ್ಬ ಮಗಳಿದ್ದಾಳೆ. ಗಂಡ ಹೆಂಡತಿ ನಡುವೆ ಹೊಂದಾಣಿಕೆ ಇಲ್ಲದ ಕಾರಣದಿಂದ ವಿಚ್ಛೇದನ ಪಡೆದು ಈತ ಹೆಂಡತಿಯಿಂದ ದೂರ ಇದ್ದ. ಈ ಸಮಯದಲ್ಲಿ ರಾಮಾಂಜಿನಪ್ಪ ಸರೋಜಾಳೊಂದಿಗೆ ಸ್ನೇಹ ಬೆಳಸಿದ್ದ. ಹೀಗೆ ಸ್ನೇಹ ಹೊಂದಿದ್ದ ಸರೋಜಾ ಮತ್ತು ರಾಮಾಂಜಿನಪ್ಪ ಕಾರಿನಲ್ಲಿ ಹೊರಟು, ಮಾರಸಂದ್ರ ಮಾರ್ಗವಾಗಿ ದೊಡ್ಡಬಳ್ಳಾಪುರ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕೆ.ಜಿ.ಕುಂಟನಹಳ್ಳಿಯ ನಿರ್ಜನ ಪ್ರದೇಶಕ್ಕೆ ಬಂದಿದ್ದಾರೆ. ಇಲ್ಲಿ ಕೆಲಹೊತ್ತು ಖಾಸಗಿ ಕ್ಷಣಗಳನ್ನ ಕಳೆದಿದ್ದಾರೆ. ಕೊನೆಯಲ್ಲಿ ಇಬ್ಬರ ನಡುವೆ ಏನೋ ಮಾತಾಗಿದೆ. ಇದರಿಂದ ಕೆರಳಿದ ಆತ ಮಾರಾಕಾಸ್ತ್ರದಿಂದ ಕೊಲೆ ಮಾಡಿ ಅನಂತರ ಕಾರಿನಲ್ಲಿಯೇ ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ವೇಳೆ, ಆತನ ಬಟ್ಟೆಗೂ ಬೆಂಕಿ ತಗುಲಿದೆ. ಹೀಗಾಗಿ ದೂರದಲ್ಲಿ ಶರ್ಟ್ ಮೊಬೈಲ್ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂದಹಾಗೇ ಕಾರು ರಾಮಾಂಜಿನಪ್ಪ ಅವರ ಪಕ್ಕದ ಮನೆಯ ಸುರೇಶ್ ಎಂಬುವರಿಗೆ ಸೇರಿದ್ದು, ಆರೋಗ್ಯ ಸರಿ ಇಲ್ಲ ಆಸ್ಪತ್ರೆಗೆ ಹೋಗಬೇಕು ಎಂದು ರಾಮಾಂಜಿನಪ್ಪ ಕಾರು ತೆಗೆದುಕೊಂಡು ಬಂದಿದ್ದ. ಆದರೆ, ಕಾರಿಗೆ ಬೆಂಕಿ ಬಿದ್ದ ತಕ್ಷಣವೇ ಕಾರು ಮಾಲೀಕ ಸುರೇಶ್ ಮೊಬೈಲ್ಗೆ ಬೆಂಕಿ ಅವಘಡದಲ್ಲಿ ಕಾರು ಸುಟ್ಟುಹೋಗಿದೆ ಎಂಬ ಸಂದೇಶ ಬಂದಿದೆ. ಈ ಮಾಹಿತಿ ಆದರಿಸಿ ಸ್ಥಳಕ್ಕೆ ಬಂದ ಸುರೇಶ್ ಪರಿಶೀಲನೆ ಮಾಡಿದಾಗ ಸುಟ್ಟುಕರಲಾಗಿದ್ದ ಕಾರಿನಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾರು ಮಾಲೀಕ ಸುರೇಶ್, ಕಾರು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಪ್ರಕರಣ ದಾಖಲು ಮಾಡಿದ್ದಾರೆ ಎಂದು ಎಸ್ಪಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ನಡುವೆ ಘಟನೆಯ ಮಾಹಿತಿ ಪಡೆದಿದ್ದ ಪೊಲೀಸರು ರಾಮಾಂಜಿನಪ್ಪ ಬೆನ್ನತ್ತಿದ್ದರು. ಈ ಸುದ್ದಿ ತಿಳಿದ ಆತ ಮಧ್ಯರಾತ್ರಿ ಸುಮಾರಿಗೆ ಬಿಡದಿ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳದಲ್ಲಿ ವೊಟರ್ ಐಡಿ ಪತ್ತೆಯಾಗಿದ್ದು, ರೈಲ್ವೆ ಪೊಲೀಸರು ಈ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಈ ಪ್ರಕರಣವನ್ನು ಕೆಲವೇ ತಾಸಿನಲ್ಲಿ ಭೇದಿಸಿದ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm