ಬ್ರೇಕಿಂಗ್ ನ್ಯೂಸ್
08-05-26 07:02 pm HK News Staffer ಕ್ರೈಂ
ಪುತ್ತೂರು, ಮೇ 8: ಕಡಬ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಕರೆದುಕೊಂಡು ಬಂದು ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಡಬ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು ಯಾವುದೇ ಅಂತಹ ಚಟುವಟಿಕೆ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಮೇ 07ರಂದು ಐತ್ತೂರಿನ ಮನೆಯೊಂದರಲ್ಲಿ ಜನ ಹೆಚ್ಚು ಸೇರಿರುವ ಬಗ್ಗೆ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ್ದು ಒಟ್ಟು 4 ಕುಟುಂಬಗಳಿಗೆ ಸೇರಿದ 23 ಜನ ಗಂಡಸರು, ಮಹಿಳೆಯರು ಹಾಗೂ ಮಕ್ಕಳು ಅಲ್ಲಿ ಇರುವುದಾಗಿ ಕಂಡುಬಂದಿದೆ. ವಿಚಾರಣೆಯಲ್ಲಿ ಅವರುಗಳೆಲ್ಲರೂ ಬೆಂಗಳೂರಿನ ಪರಿಚಯದವರಾಗಿದ್ದು, ಮಂಗಳೂರಿಗೆ ಪ್ರವಾಸದ ನಿಮಿತ್ತ ಬಂದಿರುವುದಾಗಿ ತಿಳಿಸಿರುತ್ತಾರೆ.
ಹಲವು ವರ್ಷಗಳಿಂದ ಪರಿಚಯವಿರುವ ಬೆಂಗಳೂರಿನ ಚರ್ಚ್ ಒಂದರ ಫಾದರ್ ಅವರ ತಮ್ಮನ ಕಡಬದ ಮನೆಯಲ್ಲಿ ತಂಗಿರುವುದಾಗಿ ತಿಳಿಸಿರುತ್ತಾರೆ. ವಿಚಾರಣೆಯಲ್ಲಿ ಎಲ್ಲರೂ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದು, ಸುಮಾರು 15 ರಿಂದ 20 ವರ್ಷಗಳಿಂದ ಕ್ರಿಶ್ಚಿಯನ್ ಧರ್ಮವನ್ನು ಸ್ವಯಂಪ್ರೇರಿತವಾಗಿ ಪಾಲಿಸಿಕೊಂಡು ಬರುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಯಾವುದೇ ಬಲವಂತದ ಮತಾಂತರ ನಡೆದಿರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಸದರಿ ವಿಚಾರದಲ್ಲಿ ಯಾವುದೇ ಅನೈತಿಕ ಚಟುವಟಿಕೆ ಅಥವಾ ಬಲವಂತದ ಮತಾಂತರ ನಡೆದಿರುವ ಬಗ್ಗೆ ವಿಚಾರಣೆ ವೇಳೆ ಮಾಹಿತಿ ದೊರೆತಿರುವುದಿಲ್ಲ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm