ಬ್ರೇಕಿಂಗ್ ನ್ಯೂಸ್
09-05-26 06:42 pm HK News Staffer ಕ್ರೈಂ
ಬೆಂಗಳೂರು, ಮೇ 9: ಯಾದಗಿರಿ ಜಿಲ್ಲೆಯ ಗುರುಮಠಕಲ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಾತಿ ನಿಂದನೆ ಪ್ರಕರಣದಿಂದ ಆರೋಪಿಯನ್ನು ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ಇನಾಂದಾರ್ ನೇತೃತ್ವದ ತಂಡ ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದೆ.
ಆರೋಪಿಯನ್ನು ಬಂಧಿಸದಿರಲು ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದ ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಕೇಸ್ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಂದು ಲಕ್ಷ ರೂ. ಹಣವನ್ನು ಪಡೆಯಲು ಒಪ್ಪಂದವಾಗಿತ್ತು ಎಂದವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಗುರುಮಠಕಲ್ನ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ಒಂದು ಲಕ್ಷ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಇನ್ಸ್ ಪೆಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm