ಬ್ರೇಕಿಂಗ್ ನ್ಯೂಸ್
18-05-26 06:47 pm HK News Staffer ಕ್ರೈಂ
ಮಂಗಳೂರು, ಮೇ 18 : ಇನ್ಸ್ಟಾಮಾರ್ಟ್ ಉದ್ಯೋಗಿ ನೌಫಾಲ್ ಸಾವಿನ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಘಟನೆಯ ಹಿಂದೆ ಲಿಫ್ಟ್ ಸುರಕ್ಷತೆ, ಪರವಾನಗಿ ಹಾಗೂ ಕಟ್ಟಡ ಮಾಲೀಕರ ಬೇಜವಾಬ್ದಾರಿ ಕುರಿತು ಪ್ರಶ್ನೆಗಳು ಎದ್ದಿವೆ. ನಗರದ ಕುಂಟಿಕಾನ ಸಮೀಪದ ಕಟ್ಟಡದಲ್ಲಿ ಸಂಭವಿಸಿದ ಲಿಫ್ಟ್ ದುರ್ಘಟನೆಯ ವಿಚಾರದಲ್ಲಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳ್ತಂಗಡಿ ಮೂಲದ ನೌಫಾಲ್ ಎಂಬ ಯುವಕ ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ, “ಈ ಲಿಫ್ಟ್‌ಗೆ ಅಧಿಕೃತ ಪರವಾನಗಿ ಇದೆಯೇ? ನಗರ ಪಾಲಿಕೆ ಅನುಮತಿ ನೀಡಿದೆಯೇ? ಎಂಬ ಪ್ರಶ್ನೆಗಳು ಇದೀಗ ಕೇಳಿಬರುತ್ತಿವೆ. ಸಾಮಾನ್ಯವಾಗಿ ವಾಣಿಜ್ಯ ಕಟ್ಟಡಗಳಲ್ಲಿ ಅಳವಡಿಸುವ ಲಿಫ್ಟ್‌ಗಳ ನಿರ್ವಹಣೆ ಹಾಗೂ ಸುರಕ್ಷತಾ ತಪಾಸಣೆಗೆ ಮೆಸ್ಕಾಂ ಅಥವಾ ಸಂಬಂಧಿತ ತಾಂತ್ರಿಕ ಇಲಾಖೆಯ ಅಧಿಕಾರಿಗಳನ್ನು ನೇಮಿಸಲಾಗುತ್ತದೆ. ಅವರು ಪ್ರತಿವರ್ಷ ಪರಿಶೀಲನೆ ನಡೆಸಿ ಸುರಕ್ಷತಾ ಮಾನದಂಡಗಳನ್ನು ಖಚಿತಪಡಿಸಬೇಕು. ಆದರೆ, ಈ ಪ್ರಕರಣದಲ್ಲಿ ಬಳಸಲಾಗುತ್ತಿದ್ದ ಲಿಫ್ಟ್ ಸಾಮಾನ್ಯ ಪ್ರಯಾಣಿಕರ ಲಿಫ್ಟ್ ಮಾದರಿಯದ್ದಲ್ಲ ಎಂಬ ಅನುಮಾನ ವ್ಯಕ್ತವಾಗಿದೆ.

ಸ್ಥಳೀಯರ ಆರೋಪದ ಪ್ರಕಾರ, ಪಾರ್ಕಿಂಗ್ ಜಾಗದಲ್ಲೇ ತಾತ್ಕಾಲಿಕ ರೀತಿಯಲ್ಲಿ ತಗಡಿನಿಂದ ಸರಕು ಸಾಗಣೆಗಾಗಿ ಲಿಫ್ಟ್ ನಿರ್ಮಿಸಲಾಗಿತ್ತು. “ಸರಕು ಸಾಗಣೆ ಲಿಫ್ಟ್ ಹಾಳಾದರೆ ವ್ಯಕ್ತಿ ಕೆಳಗೆ ಬೀಳುವ ಸಾಧ್ಯತೆ ಇರುತ್ತದೆ. ಆದರೆ ಸಾಯುವ ಮಟ್ಟದ ದುರಂತ ಹೇಗೆ ಸಂಭವಿಸಿತು?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪ್ರಕರಣದಲ್ಲಿ ಕೇವಲ ಇನ್ಸ್ಟಾಮಾರ್ಟ್ ಕಂಪನಿಯ ಹೊಣೆಗಾರಿಕೆ ಮಾತ್ರವಲ್ಲ, ಕಟ್ಟಡ ಮಾಲೀಕರ ಪಾತ್ರವನ್ನೂ ತನಿಖೆ ಮಾಡಬೇಕು ಎಂದು ಆಗ್ರಹ ಕೇಳಿಬಂದಿದೆ. “ಕಟ್ಟಡ ಮಾಲೀಕ ರಸಾಕ್ ಎಂಬಾತ ಕೇರಳ ಮೂಲದವನು ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ಕೇಳಿದಾಗ, ‘ನನಗೂ ಇದಕ್ಕೂ ಸಂಬಂಧ ಇಲ್ಲ, ಎಲ್ಲವೂ ಕಾನೂನುಬದ್ಧವಾಗಿದೆ’ ಎಂದು ಹೇಳುತ್ತಿದ್ದಾರೆ. ಆದರೆ ಕಟ್ಟಡದಲ್ಲಿ ಪಾರ್ಕಿಂಗ್ ಜಾಗವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸಲು ಅವಕಾಶ ನೀಡಿದ್ದು ಹೇಗೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.
ಘಟನೆಯ ನಂತರ ಇನ್ಸ್ಟಾಮಾರ್ಟ್ ಕೇಂದ್ರದ ಒಳಗೆ ಯಾರನ್ನೂ ಬಿಡುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಸ್ಥಳದಲ್ಲಿ ಬೌನ್ಸರ್ ನಿಯೋಜನೆ ಮಾಡಿ ಸಾರ್ವಜನಿಕರು ಹಾಗೂ ಮಾಧ್ಯಮದವರ ಪ್ರವೇಶ ತಡೆಯಲಾಗುತ್ತಿದೆ ಎಂದು ಕೆಲವರು ದೂರಿದ್ದಾರೆ. ಇನ್ನೊಂದೆಡೆ, ಘಟನೆ ಬಳಿಕ ಕಂಪನಿ, ಕಟ್ಟಡ ಮಾಲೀಕ ಅಥವಾ ಸಂಬಂಧಿತ ಅಧಿಕಾರಿಗಳಿಂದ ಸ್ಪಷ್ಟ ಪ್ರತಿಕ್ರಿಯೆ ಲಭ್ಯವಾಗದಿರುವುದು ಅನುಮಾನಗಳಿಗೆ ಕಾರಣವಾಗಿದೆ. ನಗರಪಾಲಿಕೆ, ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಸುರಕ್ಷತಾ ಸಂಸ್ಥೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm