ಬ್ರೇಕಿಂಗ್ ನ್ಯೂಸ್
21-05-26 04:34 pm HK News Staffer ಕ್ರೈಂ
ಮಂಗಳೂರು, ಮೇ 21: ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣದಲ್ಲಿ ಎಸ್ಐಟಿ ತನಿಖೆ ಆರು ತಿಂಗಳ ಬಳಿಕ ಮತ್ತೆ ಚುರುಕುಗೊಂಡಿದೆ. ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿಗೆ ಬೆಂಗಳೂರಿನಿಂದ ಬಂದ ಎಫ್ ಎಸ್ ಎಲ್ ತಜ್ಞರ ತಂಡ ಭೇಟಿ ನೀಡಿದೆ.
ಬೆಂಗಳೂರಿನಿಂದ ಬಂದಿರುವ ಮೂರು ಮಂದಿ ಅಧಿಕಾರಿಗಳ ತಂಡ ಎಸ್ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತೆರಳಿದೆ. ಬರುಡೆ ಸಿಕ್ಕಿರುವ ಜಾಗದಲ್ಲಿ ಎಫ್ಎಸ್ಎಲ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಬಂಗ್ಲೆಗುಡ್ಡೆ ಪ್ರದೇಶಕ್ಕೆ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರದೀಪ್ ಕುಲಾಲ್ ನನ್ನು ಪೊಲೀಸರು ಕರೆಸಿಕೊಂಡಿದ್ದಾರೆ.


ಪ್ರಕರಣದ ಕುರಿತಾಗಿ BNSS ಸೆಕ್ಷನ್ 183 ಅಡಿ ಪ್ರದೀಪ್ ಕುಲಾಲ್ ಕೋರ್ಟಿನಲ್ಲಿ ಹೇಳಿಕೆ ನೀಡಿದ್ದ. ಅಂದು ವೈರಲ್ ಆಗಿದ್ದ ರಾತ್ರಿ ಹೊತ್ತು ಕಾಡಿನಲ್ಲಿ ಬರುಡೆ ತೆಗೆಯುವ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಪ್ರದೀಪ್, ಬಳಿಕ ಎಸ್ಐಟಿ ಅಧಿಕಾರಿಗಳ ತನಿಖೆಯ ಬಳಿಕ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ ಎನ್ನಲಾಗಿದೆ. ಇದೀಗ ಆರು ತಿಂಗಳ ಬಳಿಕ ಸಾಕ್ಷಿದಾರ ಪ್ರದೀಪ್ ನನ್ನು ಸ್ಥಳಕ್ಕೆ ಕರೆಸಿ ಎಫ್ಎಸ್ಎಲ್ ತಜ್ಞರು ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ.
ಬುರುಡೆ ಹೊರತೆಗೆದ ವೈರಲ್ ಆಗಿದ್ದ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆನ್ನಲಾದ ಬಂಗ್ಲೆಗುಡ್ಡೆ ಜಾಗದಲ್ಲಿ ಸನ್ನಿವೇಶವನ್ನು ಮರು ಸೃಷ್ಟಿಸಲು ಎಫ್ಎಸ್ಎಲ್ ತಂಡ ಮುಂದಾಗಿದ್ದು ಇದಕ್ಕಾಗಿ ಪ್ರದೀಪ್ ಕುಲಾಲ್ ನನ್ನು ಸ್ಥಳಕ್ಕೆ ಕರೆಸಿಕೊಂಡಿರುವ ಮಾಹಿತಿ ಇದೆ. ಮರು ಸೃಷ್ಟಿಸಿದ ಬಳಿಕ ಹಳೆಯ ವಿಡಿಯೋ ಹಾಗೂ ಈಗಿನ ವಿಡಿಯೋವನ್ನು ತಜ್ಞರು ತಾಳೆ ಹಾಕಲಿದ್ದು ಸಾಮ್ಯತೆ ಬಗ್ಗೆ ಪರಿಶೀಲಿಸಲಿದ್ದಾರೆ. ತಲೆ ಬುರುಡೆಯನ್ನು ಆರೋಪಿಗಳು ಅದೇ ಜಾಗದಿಂದ ತೆಗೆದಿದ್ದರೇ ಎಂಬ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ. ಬಳಿಕ ಈ ಬಗ್ಗೆ ವರದಿಯನ್ನು ಕೋರ್ಟಿಗೆ ಸಲ್ಲಿಸುವ ಸಾಧ್ಯತೆಯಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm