ಬ್ರೇಕಿಂಗ್ ನ್ಯೂಸ್
06-01-21 11:40 am Udupi Correspondent ಕ್ರೈಂ
ಉಡುಪಿ, ಜ.5: ಮಂಗಳೂರು ಮತ್ತು ಉಡುಪಿಯಲ್ಲಿ ಪೊಲೀಸರಿಗೆ ಸವಾಲಾಗುವಂತೆ ಸರಣಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಈತ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಒಂಬತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಮಂಗಳೂರಿನ ಮಂಗಳಾದೇವಿ ಮುಳಿಹಿತ್ಲು ನಿವಾಸಿ ಚಂದ್ರಶೇಖರ (25) ಬಂಧಿತ ಆರೋಪಿ. ಈತನಿಂದ ಒಟ್ಟು 9,38,200 ರೂ. ಮೌಲ್ಯದ 172.02 ಗ್ರಾಂ ಚಿನ್ನ ಹಾಗೂ ಟಿವಿಎಸ್ ಸ್ಟಾರ್ ಸಿಟಿ ಬೈಕ್, ಟಿವಿಎಸ್ ವಿಕ್ಟರ್, ಜುಪಿಟರ್ ಸ್ಟೂಟರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲು ಎಸ್ಪಿ ವಿಷ್ಣುವರ್ಧನ್ ಮತ್ತು ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಟಿ.ಆರ್.ಜೈಶಂಕರ್ ಹಾಗೂ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಮೊದಲ ತಂಡದಲ್ಲಿ ಉಡುಪಿ ನಗರ ವೃತ್ತ ನಿರೀಕ್ಷಕ ಮಂಜುನಾಥ ಹಾಗೂ ಸಿಬ್ಬಂದಿ, ಎರಡನೆ ತಂಡದಲ್ಲಿ ಡಿಸಿಐಬಿ ನಿರೀಕ್ಷಕ ಮಂಜಪ್ಪಡಿ ಆರ್. ಹಾಗೂ ಸಿಬ್ಬಂದಿ, ಮೂರನೆ ತಂಡದಲ್ಲಿ ಮಣಿಪಾಲ ಠಾಣಾ ನಿರೀಕ್ಷಕ ಮಂಜುನಾಥ ಹಾಗೂ ಸಿಬ್ಬಂದಿಯನ್ನು ನೇಮಿಸಲಾಯಿತು. ಜ.3ರಂದು ಡಿಸಿಐಬಿ ನಿರೀಕ್ಷಕ ಮಂಜಪ್ಪ ಮತ್ತು ತಂಡ ಜುಪಿಟರ್ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಆರೋಪಿಯನ್ನು ಕುಕ್ಕಿಕಟ್ಟೆ ಜಂಕ್ಷನ್ ಬಳಿ ಸಂಶಯದ ಮೇರೆಗೆ ವಶಕ್ಕೆ ಪಡೆದಿತ್ತು.
ಸರಕಳ್ಳತನಕ್ಕಾಗಿಯೇ ಬೈಕ್ ಕಳವು !
ಆರೋಪಿಯನ್ನ ವಿಚಾರಿಸಿ, ಸ್ಕೂಟರ್ ದಾಖಲೆ ಕೇಳಿದಾಗ, ಮಂಗಳೂರಿನ ಕಂಕನಾಡಿಯ ಗೋರಿಗುಡ್ಡೆ ಎಂಬಲ್ಲಿ ಸೆಕೆಂಡ್ ಹ್ಯಾಂಡ್ ಬಜಾರ್‌ನಿಂದ ಸ್ಕೂಟರ್ ಪಡೆದು ಟೆಸ್ಟ್ ರೈಡ್ ಮಾಡಿ ನೋಡುವುದಾಗಿ ಹೇಳಿ ತೆಗೆದುಕೊಂಡು ಬಂದಿರುವುದಾಗಿ ಹೇಳಿದ್ದಾನೆ. ಮತ್ತಷ್ಟು ವಿಚಾರಿಸಿದಾಗ ಆರೋಪಿಯ ಸರಗಳವು ಕೃತ್ಯ ಬಯಲಿಗೆ ಬಂದಿದೆ.
ಮಂಗಳೂರು ನಗರದ ಬರ್ಕೆ, ಮಣಿಪಾಲ ಹಾಗೂ ಕಂಕನಾಡಿ ಠಾಣೆ ವ್ಯಾಪ್ತಿಯಿಂದ ತಲಾ ಒಂದೊಂದು ಬೈಕ್‌ನ್ನು ಇದೇ ರೀತಿ ಮೋಸದಿಂದ ಪಡೆದು, ಅದೇ ಬೈಕ್‌ಗಳನ್ನು ಸರಗಳ್ಳತನಕ್ಕೆ ಉಪಯೋಗಿಸಿದ್ದಾಗಿ ಆರೋಪಿ ವಿಚಾರಣೆ ವೇಳಿ ಹೇಳಿದ್ದಾನೆ.
ಮಂಗಳೂರು, ಉಡುಪಿಯಲ್ಲಿ 9 ಕಡೆ ಸರಗಳ್ಳತನ
ಉಡುಪಿ ನಗರ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು, ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ ಎರಡು, ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ಒಂದು ಮತ್ತು ಮಂಗಳೂರು ನಗರದ ಕದ್ರಿ, ಮುಲ್ಕಿಯಲ್ಲಿ ತಲಾ ಒಂದು ಸರಗಳ್ಳತನ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಈತ ಅಕ್ಟೋಬರ್ ತಿಂಗಳಲ್ಲಿ 3, ನವೆಂಬರ್ ತಿಂಗಳಲ್ಲಿ ಮೂರು, ಡಿಸೆಂಬರ್ ತಿಂಗಳಲ್ಲಿ ಒಂದೇ ದಿನ ನಾಲ್ಕು ಸರಕಳವು ಕೃತ್ಯ ಎಸಗಿದ್ದನು.
ಆರೋಪಿ ಇನ್ನು ಹೆಚ್ಚಿನ ಕಡೆಗಳಲ್ಲಿ ಅಪರಾಧ ಎಸಗಿರುವ ಬಗ್ಗೆ ಶಂಕೆ ಇದ್ದು, ಈ ಬಗ್ಗೆ ಉಡುಪಿ ನಗರ ವೃತ್ತ ನಿರೀಕ್ಷಕ ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಬಂಧಿತ ಈ ಹಿಂದೆ ದ.ಕ. ಜಿಲ್ಲೆಯ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಆರೋಪಿಯೂ ಆಗಿದ್ದಾನೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಉಡುಪಿ ನಗರ ಎಸ್ಸೈ ಸಕ್ತಿವೇಲು, ಅಪರಾಧ ವಿಭಾಗದ ಎಸ್ಸೈ ವಾಸಪ್ಪ ನಾಯ್ಕ, ಮಣಿಪಾಲ ಎಸ್ಸೈ ರಾಜ್‌ಶೇಖರ್, ಮಲ್ಪೆಎಸ್ಸೈ ತಿಮ್ಮೇಶ್, ಕಾಪು ಎಸ್ಸೈ ರಾಘವೇಂದ್ರ, ಉಡುಪಿ ಸಂಚಾರ ಠಾಣಾ ಎಸ್ಸೈಗಳಾದ ಅಬ್ದುಲ್ ಖಾದರ್ ಮತ್ತು ಶೇಖರ್ ಹಾಗೂ ತಾಂತ್ರಿಕ ವಿಭಾಗ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ.
ನರ್ಸಿಂಗ್ ಕೋರ್ಸ್ ಮುಗಿಸಿರುವ ಆರೋಪಿ ಚಂದ್ರಶೇಖರ್, ಕೋವಿಡ್ ಲಾಕ್‌ಡೌನ್ ನಂತರ ಕೆಲಸ ಕಳಕೊಂಡಿದ್ದನು. ಹಣಕ್ಕಾಗಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕಳ್ಳತನ ಪ್ರಕರಣಗಳಲ್ಲಿ ತೊಡಗಿಸಿದ್ದ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Notorious Chain Snatcher and Bike Thief have been arrested by Udupi Police. The arrested has been identified as Chandrashekar (25).
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm