ಬ್ರೇಕಿಂಗ್ ನ್ಯೂಸ್
25-05-26 11:00 pm Mangalore Correspondent ಕ್ರೈಂ
ಮಂಗಳೂರು, ಮೇ 25: ನಗರದ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಮೊಹಮ್ಮದ್ ಇಬ್ರಾಹಿಂ ಸಿನಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 27ರಂದು ತೊಕ್ಕೊಟ್ಟು ಪ್ಲೈ ಓವರ್ ಮೇಲಿಂದ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಡಿಕ್ಕಿಪಡಿಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಕೃತ್ಯಕ್ಕೆ ಬಳಸಿದ ಕಾರನ್ನು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆಯನ್ನು ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿತ್ತು.
ಇದೀಗ ಮಂಗಳೂರಿನ ಬಜಾಲ್ ನಿವಾಸಿ ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು (21) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ 2025ನೇ ಇಸವಿಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ ಹಾಗೂ 2024ನೇ ಇಸವಿಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿ 2026ರ ಫೆಬ್ರವರಿ ತಿಂಗಳಲ್ಲಿ ಆರೀಫ್ ಹುಸೇನ್ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ತಂಡದಲ್ಲಿ ಸಕ್ರಿಯವಾಗಿದ್ದ. ಅಲ್ಲದೆ, ಆನಂತರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿರುವುದು ತನಿಖೆಯಿಂದ ತಿಳಿದುಬಂದಿದೆ. ಈತ ಕಳೆದ ನವೆಂಬರ್ ನಲ್ಲಿ ಉಪ್ಪಳದಲ್ಲಿ ಮೃತಪಟ್ಟಿದ್ದ ರೌಡಿಶೀಟರ್ “ಟೊಪ್ಪಿ ನೌಫಾಲ್” ಎಂಬಾತನ ಸಹೋದರನಾಗಿರುತ್ತಾನೆ.
ಕೊಲೆ ಪ್ರಕರಣದಲ್ಲಿ ಈಗಾಗಲೇ ಮೊಹಮ್ಮದ್ ರಿಫಾತ್ ಆಲಿ, ಇಬ್ರಾಹಿಂ ಖಲೀಲ್, ಅಶ್ಫಕ್ @ ಜುಟ್ಟು ಅಶ್ಫಕ್, ಉಮ್ಮರ್ ಫಾರೂಕ್ ಇರ್ಫಾನ್, ಮೊಹಮ್ಮದ್ ಶಾಕೀರ್, ಮೊಹಮ್ಮದ್ ರಿಜ್ವಾನ್ @ ರಿಜ್ವಾನ್, ಮೊಹಮ್ಮದ್ ಇರ್ಷಾದ್ @ ಅಕುಡು, ಮಹಮ್ಮದ್ ಹರ್ಷಾದ್, ನಿಶಾಕ್ @ ಪುಚ್ಚೆ ನಿಶಾಕ್, ಬಿ. ಜುನೈದ್ @ ಕೊಕ್ಕಡ ಜುನೈದ್ ಹಾಗೂ ಮೊಹಮ್ಮದ್ ಸುಹೇಲ್ @ ಚಿಯಾ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿರುದ್ಧ “ಕೋಕಾ ಕಾಯಿದೆ” ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm