ಬ್ರೇಕಿಂಗ್ ನ್ಯೂಸ್
26-05-26 02:43 pm HK News Staffer ಕ್ರೈಂ
ಪುತ್ತೂರು, ಮೇ 26: ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ರಜೆಗೆ ಊರಿಗೆ ಬಂದಿದ್ದ 29 ವರ್ಷದ ಯುವಕನೊಬ್ಬ ವಿದ್ಯುತ್ ಶಾಕ್‌ಗೆ ಒಳಗಾಗಿ ದುರ್ಮರಣ ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬೇಳೂರಿನ ಅಂಕಿಹಳ್ಳಿ ನಿವಾಸಿ ಜೊಆಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಎಂದು ಗುರುತಿಸಲಾಗಿದೆ. ರೋಷನ್ ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದು, ರಜೆಗೆ ಕುಟುಂಬದೊಂದಿಗೆ ಊರಿಗೆ ಬಂದಿದ್ದರು.
ವರದಿಗಳ ಪ್ರಕಾರ, ರೋಶನ್ ತಮ್ಮ ತಂದೆ-ತಾಯಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಿಡಳ್ಳಿ ಗ್ರಾಮದ ಬೊಳುಂಬುಡೆ ಪ್ರದೇಶದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಮಧ್ಯಾಹ್ನ ಊಟ ಮುಗಿಸಿ ಕೈ ತೊಳೆಯುವ ಸ್ಥಳಕ್ಕೆ ತೆರಳಿದ್ದ ವೇಳೆ ಅಚಾನಕ್ ವಿದ್ಯುತ್ ಹರಿದ ತಂತಿಗೆ ಸ್ಪರ್ಶಿಸಿ ಶಾಕ್‌ಗೆ ಒಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತಾದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದು ರಜೆಗೆ ಬಂದಿದ್ದ ಯುವಕನ ಅಕಾಲಿಕ ಸಾವು ಕುಟುಂಬವನ್ನು ಆಘಾತಕ್ಕೆ ತಳ್ಳಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಅವರು ಹೊಸ ಮನೆ ನಿರ್ಮಿಸಿ ಈ ತಿಂಗಳ ಆರಂಭದಲ್ಲೇ ಗೃಹಪ್ರವೇಶ ಮಾಡಿದ್ದರು. ಸದ್ಯ ಮೃತ ರೋಶನ್ ಪಿಂಟೋ ಅವರ ಅಂತ್ಯಕ್ರಿಯೆ ಸಕಲೇಶಪುರದಲ್ಲಿ ನೆರವೇರಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm