ಬ್ರೇಕಿಂಗ್ ನ್ಯೂಸ್
06-01-21 01:01 pm Headline Karnataka News Network ಕ್ರೈಂ
ಕಾಸರಗೋಡು, ಜ.6 : ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಲೆಗೈದ ಪ್ರಕರಣ ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ಸಂಬಂಧಿಸಿ ಪೆರ್ಲತ್ತಡ್ಕ ನಿವಾಸಿ ಶಾರದಾ (25) ಮಬ ಮಹಿಳೆಯನ್ನು ಬಂಧಿಸಿದ್ದಾರೆ.
ಡಿ.4ರಂದು ಈಕೆಯ ಪುತ್ರ, ಒಂದೂವರೆ ವರ್ಷದ ಸ್ವಸ್ತಿಕ್ ಎಂಬ ಮಗುವಿನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಪತಿ ಬಾಬು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿತ್ತು. ಮಗು ನಾಪತ್ತೆಯಾದುದರಿಂದ ಪರಿಸರವಾಸಿಗಳು ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಮೃತದೇಹವನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಗುವನ್ನು ಬಾವಿಗೆಸೆದು ಕೊಲೆಗೈದಿರುವ ಸಂಶಯ ಬಂದಿತ್ತು. ಈ ವೇಳೆ, ಪೊಲೀಸರು ಪುತ್ತೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದ ಶಾರದಾಳನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ತಡವರಿಸಿದ ಶಾರದಾ ಕೊನೆಗೆ ತಾನೇ ಮಗುವನ್ನು ಬಾವಿಗೆಸೆದು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಮಗುವನ್ನೇ ಕೊಲೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ.
ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ಸಂಶಯ ಪಡಲಾಗಿತ್ತು. ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂಬ ಬಗ್ಗೆ ಸಂಶಯ ಬಂದಿತ್ತು. ಶಾರದಾ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆರೋಪಿಗೆ ಕಾಸರಗೋಡು ನ್ಯಾಯಾಲಯ , 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
connection with the recovery of the body of an 18-month-old baby from a well, Badiadka police have arrested the mother of the baby, who happens to be the accused.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm