ಬ್ರೇಕಿಂಗ್ ನ್ಯೂಸ್
09-06-26 05:03 pm HK News Staffer ಕ್ರೈಂ
ಬೆಳ್ತಂಗಡಿ , ಜೂನ್ 9: ಬೆಳ್ತಂಗಡಿ ಹಾಗೂ ಪುಂಜಾಲಕಟ್ಟೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದು, ಒಟ್ಟು 23,67,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ.
ಕಳೆದ ಏಪ್ರೀಲ್ 5ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನದಲ್ಲಿ ಆರೋಪಿಗಳು ಚಿನ್ನಾಭರಣ ಮತ್ತು ನಗದು ಕದ್ದು ಎಸ್ಕೇಪ್ ಆಗಿದ್ದರು. ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ತನಿಖೆಯ ವೇಳೆ ಬಂಟ್ವಾಳ ಕೊಳ್ನಾಡು ನಿವಾಸಿ ಹಮೀದ್ ಎಂಬಾತನನ್ನು ಬಂಧಿಸಲಾಗಿದ್ದು ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣದಲ್ಲಿ ದೊರೆತ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಕಳೆದ ಜೂನ್ ತಿಂಗಳಲ್ಲಿ ಮತ್ತೊಬ್ಬ ಆರೋಪಿಯಾದ ಬಂಟ್ವಾಳ ಕೊಳ್ನಾಡು ಮೂಲದ ಜಾಬೀರ್ ಅಲಿಯಾಸ್ ಜಾಬೀ (38) ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಪುಂಜಾಲಕಟ್ಟೆ ಠಾಣಾ ಪ್ರಕರಣಕ್ಕೆ ಸಂಬಂಧಿಸಿದ 68.690 ಗ್ರಾಂ ಚಿನ್ನಾಭರಣ ಹಾಗೂ ₹2,00,000 ನಗದು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣವನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಒಟ್ಟಾರೆ ವಶಪಡಿಸಿಕೊಂಡ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರಿನ ಮೌಲ್ಯ ಸುಮಾರು ₹23,67,000 ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತನಿಖೆಯಲ್ಲಿ ಬಹಿರಂಗವಾದಂತೆ, ಆರೋಪಿಗಳು ಕೇವಲ ಈ ಎರಡು ಪ್ರಕರಣಗಳಲ್ಲೇ ಅಲ್ಲದೆ ಉಪ್ಪಿನಂಗಡಿ, ಬಂಟ್ವಾಳ ನಗರ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಗಳಲ್ಲಿಯೂ ತಲಾ ಒಂದೊಂದು ಪ್ರಕರಣ ಸೇರಿದಂತೆ ಒಟ್ಟು ಐದು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧದ ತನಿಖೆ ಮುಂದುವರಿದಿದೆ.
ಈ ಕಾರ್ಯಾಚರಣೆಯನ್ನು ಬೆಳ್ತಂಗಡಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿ ನಡೆಸಿದ್ದು, ತಾಂತ್ರಿಕ ವಿಭಾಗದ ಸಹಕಾರವೂ ದೊರೆತಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm